ADVERTISEMENT

‘ಅವರು’ ಕುಕ್ಕರ್‌ ಹಂಚಿದ್ದು ನನ್ನ ದುಡ್ಡಿನಿಂದ: ರಮೇಶ ಜಾರಕಿಹೊಳಿ

​ಪ್ರಜಾವಾಣಿ ವಾರ್ತೆ
Published 7 ಜುಲೈ 2020, 11:33 IST
Last Updated 7 ಜುಲೈ 2020, 11:33 IST
ರಮೇಶ ಜಾರಕಿಹೊಳಿ
ರಮೇಶ ಜಾರಕಿಹೊಳಿ    

ಬೆಳಗಾವಿ: ‘ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಕುಕ್ಕರ್‌ ಹಂಚಿದ್ದು ನನ್ನ ದುಡ್ಡಿನಿಂದ, ಅವರದ್ದಲ್ಲ (ಶಾಸಕಿ ಲಕ್ಷ್ಮಿ ಹೆಬ್ಬಾಳಕರ). ಯಾರದ್ದೋ ದುಡ್ಡು ಯಲ್ಲಮ್ಮನ ಜಾತ್ರೆ ಎನ್ನುವಂತಾಗಿದೆ’ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು.

ನಗರದಲ್ಲಿ ಮಂಗಳವಾರ ಬಿಜೆಪಿ ಗ್ರಾಮೀಣ ಘಟಕದ ಕಚೇರಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ‘ಕಳೆದ ಚುನಾವಣೆಯಲ್ಲಿ ನಾನು ಕಾಂಗ್ರೆಸ್‌ನಲ್ಲಿದ್ದಾಗ ಅವರ ಪರ ಕೆಲಸ ಮಾಡಿದ್ದೆ. ಬಿಜೆಪಿಯ ಸಂಜಯ ಪಾಟೀಲ ಅವರನ್ನು ಸೋಲಿಸಿದ್ದೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವ ಮೂಲಕ ಈ ಅನ್ಯಾಯವನ್ನು ಸರಿಪಡಿಸುತ್ತೇನೆ’ ಎಂದು ನುಡಿದರು.

‘ಡಿಸಿಸಿ ಬ್ಯಾಂಕ್‌ ಚುನಾವಣೆಯಲ್ಲಿ ಅವರು ಹಣ ಹಂಚುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಅವರು ಎಷ್ಟು ಖರ್ಚು ಮಾಡುತ್ತಾರೆಯೋ ಅದಕ್ಕಿಂತ ಎರಡು ಪಟ್ಟು ನಾನು ಸುರಿಸುತ್ತೇನೆ. ನನ್ನದು ಬೆವರು ಸುರಿಸಿ ಗಳಿಸಿದ ಹಣ, ಅವರ ರೀತಿ ಹರಾಮಿಯ ದುಡ್ಡಲ್ಲ. ಸಾಲ ಮಾಡಿ ಹಣ ನೀಡುತ್ತೇನೆ’ ಎಂದು ಹೇಳಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.