ADVERTISEMENT

ಕೊರೊನಾ ‌ಮಧ್ಯೆಯೂ ಸಮಾಜ ಕಲ್ಯಾಣ ಇಲಾಖೆಯಿಂದ ವಸತಿ ಶಾಲೆ ನಿರ್ಮಾಣ: ಕಾರಜೋಳ

​ಪ್ರಜಾವಾಣಿ ವಾರ್ತೆ
Published 16 ಆಗಸ್ಟ್ 2020, 9:15 IST
Last Updated 16 ಆಗಸ್ಟ್ 2020, 9:15 IST
ಗೋವಿಂದ ಕಾರಜೋಳ
ಗೋವಿಂದ ಕಾರಜೋಳ   

ಕಲಬುರ್ಗಿ: ಕೊರೊನಾ ಹಾವಳಿ ಮಧ್ಯೆಯೂ ರಾಜ್ಯದಾದ್ಯಂತ ಸಮಾಜ ಕಲ್ಯಾಣ ‌ಇಲಾಖೆಯಿಂದ ವಸತಿ ಶಾಲೆಗಳ ನಿರ್ಮಾಣ ಹಾಗೂ ವಸತಿನಿಲಯಗಳ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ‌ ಎಂದು ಉಪಮುಖ್ಯಮಂತ್ರಿ, ಸಮಾಜ ಕಲ್ಯಾಣ ಹಾಗೂ ಲೋಕೋಪಯೋಗಿ ಸಚಿವ ಗೋವಿಂದ ಕಾರಜೋಳ ತಿಳಿಸಿದರು.

ಸೇಡಂ ಪಟ್ಟಣದಲ್ಲಿ ₹ 122 ಕೋಟಿ ಮೊತ್ತದ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ರಾಜ್ಯದಾದ್ಯಂತ ಯಡಿಯೂರಪ್ಪ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 47 ವಸತಿ ಶಾಲೆಗಳ ಕಟ್ಟಡ ಪೂರ್ಣಗೊಂಡಿದೆ. 181 ವಸತಿಶಾಲೆಗಳ ಕಟ್ಟಡ ನಿರ್ಮಾಣ ಪ್ರಗತಿಯಲ್ಲಿದೆ. ಇದರಿಂದಾಗಿ ಬಡವರ ‌ಮಕ್ಕಳಿಗೂ ಶಿಕ್ಷಣ ‌ಸಿಗುತ್ತಿದ್ದು, ಇಲಾಖೆಯ ವಸತಿ ಶಾಲೆಗಳಲ್ಲಿ ಓದಿದ ಮಕ್ಕಳ ‌ಫಲಿತಾಂಶ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ರಾಜ್ಯದ ಸರಾಸರಿಗಿಂತಲೂ ಉತ್ತಮವಾಗಿದೆ ಎಂದರು.

ADVERTISEMENT

ಕಳೆದ ಬಾರಿ ನೆರೆ ಸಂಭವಿಸಿದಾಗ ಲೋಕೋಪಯೋಗಿ ‌ಇಲಾಖೆಯ ₹ 8 ಸಾವಿರ ಕೋಟಿ ಮೊತ್ತದ ರಸ್ತೆ, ಸೇತುವೆಗಳಿಗೆ ಹಾನಿಯಾಗಿತ್ತು. ಈಗಲೂ ₹ 2700 ಕೋಟಿ ಮೊತ್ತದ ಆಸ್ತಿ ಹಾನಿಯಾಗಿದೆ. ಇನ್ನೂ ಸರ್ವೆ ಕಾರ್ಯ ನಡೆಯುತ್ತಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.