ADVERTISEMENT

Karnataka Covid-19 Update: ರಾಜ್ಯದಲ್ಲಿ 23,253 ಪ್ರಕರಣಗಳು ಸಕ್ರಿಯ

​ಪ್ರಜಾವಾಣಿ ವಾರ್ತೆ
Published 29 ಜುಲೈ 2021, 17:00 IST
Last Updated 29 ಜುಲೈ 2021, 17:00 IST
ಮಾಸ್ಕ್ ಕುರಿತು ಜಾಗೃತಿ ಮೂಡಿಸುವ ಚಿತ್ರಗಳು–ಸಾಂದರ್ಭಿಕ ಚಿತ್ರ
ಮಾಸ್ಕ್ ಕುರಿತು ಜಾಗೃತಿ ಮೂಡಿಸುವ ಚಿತ್ರಗಳು–ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಜ್ಯದಲ್ಲಿ ಗುರುವಾರ 24 ಗಂಟೆಗಳ ಅಂತರದಲ್ಲಿ ಕೋವಿಡ್‌–19 ದೃಢಪಟ್ಟ 2,052 ಹೊಸ ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ ಸೋಂಕಿನಿಂದ 35 ಮಂದಿ ಸಾವಿಗೀಡಾಗಿದ್ದು, 1,332 ಮಂದಿ ಗುಣಮುಖರಾಗಿದ್ದಾರೆ.

ಒಟ್ಟು ಕೋವಿಡ್‌ ಪ್ರಕರಣಗಳ ಸಂಖ್ಯೆ 29 ಲಕ್ಷ ದಾಟಿದ್ದು, ಈ ಪೈಕಿ 28.41 ಲಕ್ಷಕ್ಕೂ ಹೆಚ್ಚು ಜನರು ಚೇತರಿಸಿಕೊಂಡಿದ್ದಾರೆ ಹಾಗೂ 36,491 ಮಂದಿ ಮೃತಪಟ್ಟಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ 23,253 ಪ್ರಕರಣಗಳು ಸಕ್ರಿಯವಾಗಿರುವುದು ಆರೋಗ್ಯ ಇಲಾಖೆಯ ಪ್ರಕಟಣೆಯಿಂದ ತಿಳಿದು ಬಂದಿದೆ.

ಕೋವಿಡ್‌ ಖಚಿತ ಪ್ರಕರಣಗಳ ಪ್ರಮಾಣ ಶೇ.1.37 ಮತ್ತು ಕೋವಿಡ್‌ನಿಂದ ಮೃತಪಟ್ಟವರ ಪ್ರಮಾಣ ಶೇ.1.70ರಷ್ಟಿದೆ.

ADVERTISEMENT

ಬೆಂಗಳೂರಿನಲ್ಲಿ 506 ಪ್ರಕರಣಗಳು, ದಕ್ಷಿಣ ಕನ್ನಡದಲ್ಲಿ 396, ಹಾಸನದಲ್ಲಿ 136, ಮೈಸೂರಿನಲ್ಲಿ 157, ಉಡುಪಿಯಲ್ಲಿ 174, ಕೊಡಗಿನಲ್ಲಿ 96, ಚಿಕ್ಕಮಗಳೂರಿನಲ್ಲಿ 90, ಶಿವಮೊಗ್ಗದಲ್ಲಿ 81 ಪ್ರಕರಣಗಳು ದಾಖಲಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.