ADVERTISEMENT

Covid-19 Karnataka Update: ರಾಜ್ಯದಲ್ಲಿ 50 ಸಾವಿರಕ್ಕೂ ಅಧಿಕ ಹೊಸ ಪ್ರಕರಣಗಳು

​ಪ್ರಜಾವಾಣಿ ವಾರ್ತೆ
Published 5 ಮೇ 2021, 14:27 IST
Last Updated 5 ಮೇ 2021, 14:27 IST
  ಕೋವಿಡ್ ಲಸಿಕೆಯನ್ನು ಪಡೆಯಲು ದಾವಣಗೆರೆಯ ವಿನೋಭಾನಗರದ ಸೂಪರ್ ಮಾರ್ಕೆಟ್ ಆವರಣದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂಭಾಗದಲ್ಲಿ ಸಾಲಿನಲ್ಲಿ ಕಾಯುತ್ತಿರುವ ಜನ –ಪ್ರಜಾವಾಣಿ ಚಿತ್ರ/ ಸತೀಶ ಬಡಿಗೇರ್
ಕೋವಿಡ್ ಲಸಿಕೆಯನ್ನು ಪಡೆಯಲು ದಾವಣಗೆರೆಯ ವಿನೋಭಾನಗರದ ಸೂಪರ್ ಮಾರ್ಕೆಟ್ ಆವರಣದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂಭಾಗದಲ್ಲಿ ಸಾಲಿನಲ್ಲಿ ಕಾಯುತ್ತಿರುವ ಜನ –ಪ್ರಜಾವಾಣಿ ಚಿತ್ರ/ ಸತೀಶ ಬಡಿಗೇರ್   

ಬೆಂಗಳೂರು: ಕರ್ನಾಟಕದಲ್ಲಿ ಬುಧವಾರ 24 ಗಂಟೆಗಳ ಅವಧಿಯಲ್ಲಿ ಕೋವಿಡ್‌–19 ದೃಢಪಟ್ಟ ಹೊಸ ಪ್ರಕರಣಗಳ ಸಂಖ್ಯೆ 50 ಸಾವಿರ ದಾಟಿದೆ. ಇದೇ ಅವಧಿಯಲ್ಲಿ ಸೋಂಕಿನಿಂದ 346 ಮಂದಿ ಮೃತಪಟ್ಟಿರುವುದು ಆರೋಗ್ಯ ಇಲಾಖೆಯ ಪ್ರಕಟಣೆಯಿಂದ ತಿಳಿದು ಬಂದಿದೆ.

ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಒಂದೇ ದಿನದ ಅಂತರದಲ್ಲಿ 50,112 ಪ್ರಕರಣಗಳು ದೃಢಪಟ್ಟಿವೆ. ಕೊರೊನಾ ವೈರಸ್‌ ಸೋಂಕಿನ ಖಚಿತ ಪ್ರಕರಣಗಳ ಪ್ರಮಾಣ ಶೇ 32.28ರಷ್ಟಾಗಿದೆ.

ಬೆಂಗಳೂರಿನಲ್ಲಿ ಕೊರೊನಾ ವೈರಸ್‌ ಸೋಂಕು ದೃಢಪಟ್ಟ 23,106 ಪ್ರಕರಣಗಳು ವರದಿಯಾಗಿದ್ದು, 161 ಮಂದಿ ಸಾವಿಗೀಡಾಗಿದ್ದಾರೆ. 24 ಗಂಟೆಗಳಲ್ಲಿ 26,841 ಮಂದಿ ಗುಣಮುಖರಾಗಿದ್ದಾರೆ ಹಾಗೂ ಸಕ್ರಿಯ ಪ್ರಕರಣಗಳ ಸಂಖ್ಯೆ 4,87,288ಕ್ಕೆ ಏರಿಕೆಯಾಗಿದೆ.

ADVERTISEMENT

ಮೈಸೂರಿನಲ್ಲಿ 2,790 ಪ್ರಕರಣಗಳು, ತುಮಕೂರಿನಲ್ಲಿ 2,335 ಪ್ರಕರಣಗಳು, ಉಡುಪಿಯಲ್ಲಿ 1,655 ಪ್ರಕರಣಗಳು, ಹಾಸನದಲ್ಲಿ 1,604 ಪ್ರಕರಣಗಳು, ಮಂಡ್ಯದಲ್ಲಿ 1,621 ಪ್ರಕರಣಗಳು ಹಾಗೂ ದಕ್ಷಿಣ ಕನ್ನಡದಲ್ಲಿ 1,529 ಪ್ರಕರಣಗಳು ದಾಖಲಾಗಿವೆ.

ರಾಜ್ಯದಲ್ಲಿ ಒಟ್ಟು 17.41 ಲಕ್ಷಕ್ಕೂ ಅಧಿಕ ಪ್ರರಕಣಗಳು ದಾಖಲಾಗಿವೆ. ಈ ಪೈಕಿ 12.36 ಲಕ್ಷಕ್ಕೂ ಹೆಚ್ಚು ಮಂದಿ ಗುಣಮುಖರಾಗಿದ್ದರೆ, 16,884 ಮಂದಿ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.