ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್–19 ದೃಢಪಟ್ಟ 2,298 ಹೊಸ ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ 995 ಮಂದಿ ಗುಣಮುಖರಾಗಿದ್ದಾರೆ ಹಾಗೂ ಸೋಂಕಿನಿಂದ 12 ಮಂದಿ ಮೃತಪಟ್ಟಿದ್ದಾರೆ.
ಬೆಂಗಳೂರಿನಲ್ಲೇ 1,398 ಹೊಸ ಪ್ರಕರಣಗಳು ವರದಿಯಾಗಿದ್ದು, 7 ಮಂದಿ ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಈವರೆಗೆ ಸೋಂಕಿತರಾದವರ ಸಂಖ್ಯೆ 4.21 ಲಕ್ಷ ದಾಟಿದೆ. ಉಳಿದಂತೆ ಬೀದರ್‌ನಲ್ಲಿ 82 ಪ್ರಕರಣಗಳು, ಕಲಬುರ್ಗಿಯಲ್ಲಿ 118 ಪ್ರಕರಣಗಳು, ಮೈಸೂರಿನಲ್ಲಿ 74, ತುಮಕೂರಿನಲ್ಲಿ 94, ಉಡುಪಿಯಲ್ಲಿ 79, ಹಾಸನದಲ್ಲಿ 60 ಹಾಗೂ ದಕ್ಷಿಣ ಕನ್ನಡದಲ್ಲಿ 54 ಪ್ರಕರಣಗಳು ದಾಖಲಾಗಿವೆ.
ಐಸಿಯುನಲ್ಲಿ 143 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟು 9,75,955 ಪ್ರಕರಣಗಳ ಪೈಕಿ 9,46,589 ಮಂದಿ ಗುಣಮುಖರಾಗಿದ್ದಾರೆ. ಈವರೆಗೂ 12,461 ಮಂದಿ ಸೋಂಕಿನಿಂದ ಸಾವಿಗೀಡಾಗಿದ್ದು, ಪ್ರಸ್ತುತ 16,886 ಸಕ್ರಿಯ ಪ್ರಕರಣಗಳಿರುವುದಾಗಿ ಆರೋಗ್ಯ ಇಲಾಖೆ ಪ್ರಕಟಿಸಿದೆ.
ಸೋಂಕು ದೃಢ ಪ್ರಮಾಣ ಶೇ 2.12ಕ್ಕೆ ತಲುಪಿದ್ದು, ಮರಣ ಪ್ರಮಾಣ ಶೇ 0.52 ರಷ್ಟಿದೆ. ಕೋವಿಡ್ ಪರೀಕ್ಷೆಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದ್ದು, ಒಂದು ದಿನದ ಅವಧಿಯಲ್ಲಿ 1.08 ಲಕ್ಷ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ.
ಬುಧವಾರದ ವರೆಗೂ 28,91,719 ಡೋಸ್‌ಗಳಷ್ಟು ಕೋವಿಡ್ ಲಸಿಕೆ ಹಾಕಲಾಗಿದೆ. ಬೆಂಗಳೂರಿನಲ್ಲಿ ಅತಿ ಹೆಚ್ಚು 5.92 ಲಕ್ಷ ಡೋಸ್‌ಗಳಷ್ಟು ಲಸಿಕೆ ಹಾಕಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.