ADVERTISEMENT

Covid-19 Karnataka Update: ರಾಜ್ಯದಲ್ಲಿ ಮತ್ತೆ ಕೋವಿಡ್‌ ಪ್ರಕರಣಗಳು ಹೆಚ್ಚಳ

​ಪ್ರಜಾವಾಣಿ ವಾರ್ತೆ
Published 25 ಮಾರ್ಚ್ 2021, 13:19 IST
Last Updated 25 ಮಾರ್ಚ್ 2021, 13:19 IST
ಬಿಬಿಎಂಪಿಯ ಮಾರ್ಷಲ್‌ಗಳು ಕೆ.ಆರ್‌.ಮಾರುಕಟ್ಟೆ ಸಮೀಪ ಮಾಸ್ಕ್‌ ಧರಿಸದವರಿಗೆ ದಂಡ ವಿಧಿಸುವ ಕಾರ್ಯದಲ್ಲಿ ನಿರತರಾಗಿರುವುದು.
ಬಿಬಿಎಂಪಿಯ ಮಾರ್ಷಲ್‌ಗಳು ಕೆ.ಆರ್‌.ಮಾರುಕಟ್ಟೆ ಸಮೀಪ ಮಾಸ್ಕ್‌ ಧರಿಸದವರಿಗೆ ದಂಡ ವಿಧಿಸುವ ಕಾರ್ಯದಲ್ಲಿ ನಿರತರಾಗಿರುವುದು.   

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್‌–19 ದೃಢಪಟ್ಟ 2,523 ಹೊಸ ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ 1,192 ಮಂದಿ ಗುಣಮುಖರಾಗಿದ್ದಾರೆ ಹಾಗೂ ಸೋಂಕಿನಿಂದ 10 ಮಂದಿ ಮೃತಪಟ್ಟಿದ್ದಾರೆ.

ಬೆಂಗಳೂರಿನಲ್ಲಿ 1,623 ಹೊಸ ಪ್ರಕರಣಗಳು ವರದಿಯಾಗಿದ್ದು, 6 ಮಂದಿ ಮೃತಪಟ್ಟಿದ್ದಾರೆ. ಉಳಿದಂತೆ ಬೀದರ್‌ನಲ್ಲಿ 78 ಪ್ರಕರಣಗಳು, ಕಲಬುರ್ಗಿಯಲ್ಲಿ 100 ಪ್ರಕರಣಗಳು, ಮೈಸೂರಿನಲ್ಲಿ 89, ಉಡುಪಿಯಲ್ಲಿ 145, ಹಾಸನದಲ್ಲಿ 48 ಹಾಗೂ ದಕ್ಷಿಣ ಕನ್ನಡದಲ್ಲಿ 72 ಪ್ರಕರಣಗಳು ದಾಖಲಾಗಿವೆ.

ಐಸಿಯುನಲ್ಲಿ 150 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟು 9,78,478 ಪ್ರಕರಣಗಳ ಪೈಕಿ 9,47,781 ಮಂದಿ ಗುಣಮುಖರಾಗಿದ್ದಾರೆ. ಸೋಂಕಿನಿಂದ ಈವರೆಗೂ 12,471 ಮಂದಿ ಸೋಂಕಿನಿಂದ ಸಾವಿಗೀಡಾಗಿದ್ದು, ಪ್ರಸ್ತುತ 18,207 ಸಕ್ರಿಯ ಪ್ರಕರಣಗಳಿರುವುದಾಗಿ ಆರೋಗ್ಯ ಇಲಾಖೆ ಪ್ರಕಟಿಸಿದೆ.

ADVERTISEMENT

ಗುರುವಾರದ ವರೆಗೂ ರಾಜ್ಯದಲ್ಲಿ ಒಟ್ಟು 30,44,524 ಡೋಸ್‌ಗಳಷ್ಟು ಕೋವಿಡ್‌ ಲಸಿಕೆ ಹಾಕಲಾಗಿದೆ. ಬೆಂಗಳೂರಿನಲ್ಲಿ ಅತಿ ಹೆಚ್ಚು 6.22 ಲಕ್ಷ ಡೋಸ್‌ಗಳಷ್ಟು ಲಸಿಕೆ ಹಾಕಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.