ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಕೋವಿಡ್–19ನಿಂದ 10,228 ಮಂದಿ ಗುಣಮುಖರಾಗಿದ್ದಾರೆ ಹಾಗೂ ಕೊರೊನಾ ವೈರಸ್ ಸೋಂಕು ದೃಢಪಟ್ಟ 9,993 ಹೊಸ ಪ್ರಕರಣಗಳು ದಾಖಲಾಗಿವೆ.
ಪ್ರಸ್ತುತ ರಾಜ್ಯದಲ್ಲಿ 1,15,151 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಈವರೆಗೂ 5,33,074 ಜನ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ ಸೋಂಕಿನಿಂದ 91 ಮಂದಿ ಸಾವಿಗೀಡಾಗಿದ್ದಾರೆ.
ಒಟ್ಟು 6,57,705 ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 9,461 ಮಂದಿ ಮೃತಪಟ್ಟಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರಿನಲ್ಲಿ 5,012 ಹೊಸ ಪ್ರಕರಣಗಳು ದಾಖಲಾಗಿವೆ, 34 ಮಂದಿ ಸಾವಿಗೀಡಾಗಿದ್ದಾರೆ ಹಾಗೂ 3,354 ಜನ ಗುಣಮುಖರಾಗಿದ್ದಾರೆ. ಒಟ್ಟು 55,736 ಕೊರೊನಾ ವೈರಸ್ ಸೋಂಕು ಸಕ್ರಿಯ ಪ್ರಕರಣಗಳಿವೆ.
ಕಳೆದ 24 ಗಂಟೆಗಳಲ್ಲಿ ಚಿತ್ರದುರ್ಗದಲ್ಲಿ 332 ಪ್ರಕರಣಗಳು, ಮೈಸೂರಿನಲ್ಲಿ 373, ತುಮಕೂರಿನಲ್ಲಿ 475 ಹೊಸ ಪ್ರಕರಣಗಳು ದಾಖಲಾಗಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.