ADVERTISEMENT

Covid-19 Karnataka Update: ಬೆಂಗಳೂರಿನಲ್ಲಿ ಮತ್ತೆ 5,000ಕ್ಕೂ ಹೆಚ್ಚು ಪ್ರಕರಣ

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2020, 16:14 IST
Last Updated 8 ಅಕ್ಟೋಬರ್ 2020, 16:14 IST
ಕೊರೊನಾ ವೈರಸ್ ಸೋಂಕು ಪರೀಕ್ಷೆ–ಸಾಂದರ್ಭಿಕ ಚಿತ್ರ
ಕೊರೊನಾ ವೈರಸ್ ಸೋಂಕು ಪರೀಕ್ಷೆ–ಸಾಂದರ್ಭಿಕ ಚಿತ್ರ   
""

ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಕೋವಿಡ್‌–19ನಿಂದ 9,613 ಮಂದಿ ಗುಣಮುಖರಾಗಿದ್ದಾರೆ ಹಾಗೂ ಕೊರೊನಾ ವೈರಸ್‌ ಸೋಂಕು ದೃಢಪಟ್ಟ 10,704 ಹೊಸ ಪ್ರಕರಣಗಳು ದಾಖಲಾಗಿವೆ.

ಪ್ರಸ್ತುತ ರಾಜ್ಯದಲ್ಲಿ 1,17,143 ಕೋವಿಡ್‌ ಸಕ್ರಿಯ ಪ್ರಕರಣಗಳಿದ್ದು, ಈವರೆಗೂ 5,52,519 ಜನ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ ಸೋಂಕಿನಿಂದ 101 ಮಂದಿ ಸಾವಿಗೀಡಾಗಿದ್ದಾರೆ.

ಒಟ್ಟು 6,79,356 ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 9,675 ಮಂದಿ ಮೃತಪಟ್ಟಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ADVERTISEMENT

ಬೆಂಗಳೂರಿನಲ್ಲಿ 5,121 ಹೊಸ ಪ್ರಕರಣಗಳು ದಾಖಲಾಗಿವೆ, 43 ಮಂದಿ ಸಾವಿಗೀಡಾಗಿದ್ದಾರೆ ಹಾಗೂ 3,505 ಜನ ಗುಣಮುಖರಾಗಿದ್ದಾರೆ. ಒಟ್ಟು 60,197 ಕೊರೊನಾ ವೈರಸ್‌ ಸೋಂಕು ಸಕ್ರಿಯ ಪ್ರಕರಣಗಳಿವೆ.

ಕಳೆದ 24 ಗಂಟೆಗಳಲ್ಲಿ ತುಮಕೂರಿನಲ್ಲಿ 509 ಹೊಸ ಪ್ರಕರಣಗಳು, ಮೈಸೂರಿನಲ್ಲಿ 642 ಪ್ರಕರಣಗಳು, ಹಾಸನದಲ್ಲಿ 441 ಹಾಗೂ ಬೆಂಗಳೂರು ಗ್ರಾಮಾಂತರದಲ್ಲಿ 368 ಪ್ರಕರಣಗಳು ದಾಖಲಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.