ADVERTISEMENT

Covid-19 Karnataka Update: ಕಳೆದ 24 ಗಂಟೆಗಳಲ್ಲಿ 9,540 ಹೊಸ ಪ್ರಕರಣಗಳು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 9 ಸೆಪ್ಟೆಂಬರ್ 2020, 15:39 IST
Last Updated 9 ಸೆಪ್ಟೆಂಬರ್ 2020, 15:39 IST
ಕೊರೊನಾ ವೈರಸ್‌ ಸೋಂಕು ಪರೀಕ್ಷೆ–ಸಾಂದರ್ಭಿಕ ಚಿತ್ರ
ಕೊರೊನಾ ವೈರಸ್‌ ಸೋಂಕು ಪರೀಕ್ಷೆ–ಸಾಂದರ್ಭಿಕ ಚಿತ್ರ   
""

ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಕೋವಿಡ್‌–19ನಿಂದ 6,860 ಮಂದಿ ಗುಣಮುಖರಾಗಿದ್ದಾರೆ ಹಾಗೂ ಕೊರೊನಾ ವೈರಸ್‌ ಸೋಂಕು ದೃಢಪಟ್ಟ 9,540 ಹೊಸ ಪ್ರಕರಣಗಳು ದಾಖಲಾಗಿವೆ.

ಪ್ರಸ್ತುತ ರಾಜ್ಯದಲ್ಲಿ 99,470 ಕೋವಿಡ್‌ ಪ್ರಕರಣಗಳಿದ್ದು, ಈವರೆಗೂ 3,15,433 ಜನ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ ಸೋಂಕಿನಿಂದ 128 ಮಂದಿ ಸಾವಿಗೀಡಾಗಿದ್ದಾರೆ. ಒಟ್ಟು 4,21,730 ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 6,808 ಮಂದಿ ಮೃತಪಟ್ಟಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ 3,419 ಹೊಸ ಪ್ರಕರಣಗಳು ದಾಖಲಾಗಿವೆ, 41 ಮಂದಿ ಸಾವಿಗೀಡಾಗಿದ್ದಾರೆ ಹಾಗೂ 1,564 ಜನ ಗುಣಮುಖರಾಗಿದ್ದಾರೆ. ಒಟ್ಟು 1,57,044 ಕೊರೊನಾ ವೈರಸ್‌ ಸೋಂಕು ಪ್ರಕರಣಗಳು ದಾಖಲಾಗಿವೆ.

ADVERTISEMENT

ಬಳ್ಳಾರಿಯಲ್ಲಿ 559 ಹೊಸ ಪ್ರಕರಣಗಳು ದಾಖಲಾಗಿವೆ, 8 ಮಂದಿ ಸಾವಿಗೀಡಾಗಿದ್ದಾರೆ. ಮೈಸೂರಿನಲ್ಲಿ 500 ಪ್ರಕರಣಗಳು ಹಾಗೂ ಶಿವಮೊಗ್ಗದಲ್ಲಿ 555 ಪ್ರಕರಣಗಳು (ಎರಡು ದಿನಗಳು ಸೇರಿ) ದಾಖಲಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.