ADVERTISEMENT

ಉಡುಪಿ | ಐವರಲ್ಲಿ ಕೋವಿಡ್‌ ಸೋಂಕು ದೃಢ

​ಪ್ರಜಾವಾಣಿ ವಾರ್ತೆ
Published 15 ಮೇ 2020, 7:43 IST
Last Updated 15 ಮೇ 2020, 7:43 IST
ಕೊರೊನಾ ವೈರಸ್‌
ಕೊರೊನಾ ವೈರಸ್‌    

ಉಡುಪಿ: ಈಚೆಗೆ ದುಬೈನಿಂದ ಮರಳಿದ್ದ ಐವರಲ್ಲಿ ಕೋವಿಡ್‌–19 ಸೋಂಕು ದೃಢಪಟ್ಟಿದೆ. 52, 31, 37 ವರ್ಷದ ಪುರುಷರು ಹಾಗೂ 33, 38 ವರ್ಷದ ಮಹಿಳೆಯರಲ್ಲಿ ಸೋಂಕು ಕಾಣಿಸಿಕೊಂಡಿದೆ.

ಮೇ 13ರಂದು ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ ಉಡುಪಿ ಜಿಲ್ಲೆಯ 49 ಮಂದಿಯನ್ನು ಜಿಲ್ಲೆಗೆ ಕರೆತಂದು ಕ್ವಾರಂಟೈನ್‌ ಮಾಡಲಾಗಿತ್ತು. ಎಲ್ಲರ ಗಂಟಲ ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಅವರಲ್ಲಿ ಐವರಲ್ಲಿ ಸೋಂಕು ಕಾಣಿಸಿಕೊಂಡಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್‌ ತಿಳಿಸಿದ್ದಾರೆ.

ಕ್ವಾರಂಟೈನ್‌ನಲ್ಲಿದ್ದ ಐವರು ಸೋಂಕಿತರಿಗೆ ಟಿಎಂಎ ಪೈ ಕೋವಿಡ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದುಬೈನಿಂದ ಬಂದವರೆಲ್ಲರೂ ಕ್ವಾರಂಟೈನ್‌ನಲ್ಲಿರುವುದರಿಂದ ಸೋಂಕು ಸಮುದಾಯಕ್ಕೆ ಹರಡುವ ಅಪಾಯವಿಲ್ಲ. ಸೋಂಕಿತರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಕ್ಕೆ ಬಂದವರನ್ನು ಗುರುತಿಸಿ ಕ್ವಾರಂಟೈನ್‌ ಮಾಡಲಾಗುತ್ತಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ADVERTISEMENT

ಉಡುಪಿ ಜಿಲ್ಲೆಯಲ್ಲಿ ಕಳೆದ ಒಂದೂವರೆ ತಿಂಗಳಿನಿಂದ ಸೋಂಕಿತ ಪ್ರಕರಣಗಳು ಪತ್ತೆಯಾಗಿರಲಿಲ್ಲ. ಜಿಲ್ಲೆ ಹಸಿರು ವಲಯಕ್ಕೆ ಸೇರ್ಪಡೆಯಾಗಿತ್ತು. ಈಚೆಗೆ ಜಿಲ್ಲಾ ವ್ಯಾಪ್ತಿಯಲ್ಲಿ ಕೆಎಸ್‌ಆರ್‌ಟಿಸಿ ಹಾಗೂ ಖಾಸಗಿ ಬಸ್‌ಗಳ ಸಂಚಾರವೂ ಆರಂಭವಾಗಿತ್ತು. ಈಗ ದಿಢೀರ್ ಸೋಂಕು ಕಾಣಿಸಿಕೊಂಡಿರುವುದು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.