ADVERTISEMENT

Covid-19 Karnataka Update | 204 ಹೊಸ ಕೋವಿಡ್-19 ಪ್ರಕರಣ, ಮೂವರು ಸಾವು

​ಪ್ರಜಾವಾಣಿ ವಾರ್ತೆ
Published 11 ಜೂನ್ 2020, 12:37 IST
Last Updated 11 ಜೂನ್ 2020, 12:37 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಜೂನ್ 10ರ ಸಂಜೆ 5 ಗಂಟೆಯಿಂದ ಜೂನ್ 11ರ ಸಂಜೆ 5 ಗಂಟೆವರೆಗೆ ರಾಜ್ಯದಲ್ಲಿ204 ಹೊಸ ಕೋವಿಡ್‌ ಪ್ರಕರಣಗಳು ಪತ್ತೆಯಾಗಿದ್ದು, ಮೂವರು ಮೃತಪಟ್ಟಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 6245ಕ್ಕೆ ಏರಿಕೆಯಾಗಿದೆ. ಇದುವರೆಗೂ 72 ಮಂದಿ ಮೃತಪಟ್ಟಿದ್ದಾರೆ.

ಈವರೆಗೆ 2,976 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 3,195 ಸಕ್ರಿಯ ಪ್ರಕರಣಗಳು ರಾಜ್ಯದಲ್ಲಿವೆ.

ADVERTISEMENT

ಇಂದು ಯಾದಗಿರಿಯಲ್ಲಿ 66, ಉಡುಪಿ 22, ಬೆಂಗಳೂರು 17, ಕಲಬುರಗಿ 16, ರಾಯಚೂರು 15, ಬೀದರ್ 14, ಶಿವಮೊಗ್ಗ 10, ದಾವಣಗೆರೆ 9, ಕೋಲಾರ 6, ಮೈಸೂರು 5, ರಾಮನಗರ 5, ವಿಜಯಪುರ 4, ಬಾಗಲಕೋಟೆ 3, ಉತ್ತರ ಕನ್ನಡ 3, ದಕ್ಷಿಣ ಕನ್ನಡ 2, ಹಾಸನ 2, ಧಾರವಾಡ 2, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು ಹಾಗೂ ಕೊಪ್ಪಳದಲ್ಲಿ ತಲಾ ಒಂದೊಂದು ಪ್ರಕರಣಗಳು ಪತ್ತೆಯಾಗಿವೆ.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.