ಬೆಂಗಳೂರು: ರಾಜ್ಯದಾದ್ಯಂತ ಮಂಗಳವಾರ ಸಂಜೆ 5 ಗಂಟೆಯಿಂದ ಬುಧವಾರ ಸಂಜೆ 5 ಗಂಟೆ ಅವಧಿಯಲ್ಲಿ 4,764 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 55 ಮಂದಿ ಸಾವಿಗೀಡಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಇಂದು 2050 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 15 ಮಂದಿ ಕೊನೆಯುಸಿರೆಳೆದಿದ್ದಾರೆ.
ರಾಜ್ಯದಲ್ಲಿ ಇದುವರೆಗೆ 75, 833 ಮಂದಿಗೆ ಸೋಂಕು ತಗುಲಿದ್ದು, 1519 ಮಂದಿ ಮೃತಪಟ್ಟಿದ್ದಾರೆ.
ಇದುವರೆಗೆ 27,239 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ ರಾಜ್ಯದಲ್ಲಿ 47,069 ಸಕ್ರಿಯ ಪ್ರಕರಣಗಳಿದ್ದು, 618 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.