ADVERTISEMENT

Covid-19 Karnataka Update| ರಾಜ್ಯದಲ್ಲಿ 42,216 ಸಕ್ರಿಯ ಪ್ರಕರಣ

​ಪ್ರಜಾವಾಣಿ ವಾರ್ತೆ
Published 20 ಜುಲೈ 2020, 15:51 IST
Last Updated 20 ಜುಲೈ 2020, 15:51 IST
   
""

ಬೆಂಗಳೂರು: ರಾಜ್ಯದಲ್ಲಿ ಭಾನುವಾರ ಸಂಜೆ 5ರಿಂದಸೋಮವಾರ ಸಂಜೆ 5 ಗಂಟೆವರೆಗೆ 3,648ಕೋವಿಡ್‌–19 ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 67,420ಕ್ಕೆ ಏರಿಕೆಯಾಗಿದೆ.ಸದ್ಯ23,795 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ಇನ್ನೂ42,216 ಜನರಿಗೆ ಚಿಕಿತ್ಸೆ ಮುಂದುವರಿದಿದೆಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದಲ್ಲಿ ಇದುವರೆಗೆ ಒಟ್ಟು 72 ಮಂದಿ ಮೃತಪಟ್ಟಿದ್ದಾರೆ. ಸಾವಿನ ಸಂಖ್ಯೆ 1,403ಕ್ಕೆ ಏರಿದ್ದು, 580 ಸೋಂಕಿತರು ಐಸಿಯುನಲ್ಲಿದ್ದಾರೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು 160 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಆದರೆ,ಹೊಸದಾಗಿ 1452 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 32,229ಕ್ಕೆ ಏರಿಕೆಯಾಗಿದೆ.ಸದ್ಯ ಇನ್ನೂ 25,574 ಸಕ್ರಿಯ ಪ್ರಕರಣಗಳಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.