ADVERTISEMENT

ಚಿಕಿತ್ಸೆ ನೀಡುವ ದೃಶ್ಯವನ್ನು ವಿಡಿಯೊ ಮಾಡಿ ಹರಿಬಿಟ್ಟ ಕೋವಿಡ್‌ ರೋಗಿ!

​ಪ್ರಜಾವಾಣಿ ವಾರ್ತೆ
Published 14 ಏಪ್ರಿಲ್ 2020, 14:59 IST
Last Updated 14 ಏಪ್ರಿಲ್ 2020, 14:59 IST
   

ವಿಜಯಪುರ: ಜಿಲ್ಲಾಸ್ಪತ್ರೆಯ ಐಸೋಲೇಟೆಡ್‌ ವಾರ್ಡ್‌ನಲ್ಲಿ ಕೋವಿಡ್‌–19 ರೋಗಿಗಳಿಗೆ ಚಿಕಿತ್ಸೆ ನೀಡುವ ದೃಶ್ಯವನ್ನು ವಿಡಿಯೊ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವುದು ಆಸ್ಪತ್ರೆಯ ಸಿಬ್ಬಂದಿಯಲ್ಲ. ಸೋಂಕು ದೃಢಪಟ್ಟಿರುವ ರೋಗಿಯೊಬ್ಬರೇ ಮಾಡಿರುವ ಕೃತ್ಯ ಎಂದು ಜಿಲ್ಲಾಧಿಕಾರಿ ವೈ.ಎಸ್‌.ಪಾಟೀಲ ಸ್ಪಷ್ಟಪಡಿಸಿದರು.

ಕೋವಿಡ್‌–19 ರೋಗಿಗಳಿಗೆ ಅವರ ಕುಟುಂಬದವರೊಂದಿಗೆ ಮಾತನಾಡಲು ಅನುಕೂಲವಾಗಲಿ ಎಂಬ ಕಾರಣಕ್ಕೆ ಮೊಬೈಲ್‌ ಫೋನ್‌ ಬಳಸಲು ಅವಕಾಶ ನೀಡಲಾಗಿದೆ. ಆದರೆ, ಇದನ್ನು ರೋಗಿ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಹೇಳಿದರು.

ಈ ವಿಡಿಯೊವನ್ನು ಯಾರಾದರೂ ಉದ್ದೇಶಪೂರ್ವಕವಾಗಿ ಬೇರೆಯವರಿಗೆ ಕಳುಹಿಸಿದರೆ ಕ್ರಿಮಿನಲ್‌ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.