ADVERTISEMENT

Covid-19 Karnataka Update: ರಾಜ್ಯದ ಸೋಂಕಿತರ ಸಂಖ್ಯೆ 2.64 ಲಕ್ಷ

21 ದಿನಗಳಲ್ಲಿ 1.40 ಲಕ್ಷ ಕೋವಿಡ್‌ ಪ್ರಕರಣ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 21 ಆಗಸ್ಟ್ 2020, 16:00 IST
Last Updated 21 ಆಗಸ್ಟ್ 2020, 16:00 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   
""

ಬೆಂಗಳೂರು:ರಾಜ್ಯದಲ್ಲಿ ಶುಕ್ರವಾರ7,571 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 2,64,546ಕ್ಕೆ ತಲುಪಿದೆ.

21 ದಿನಗಳಲ್ಲಿ 1.40 ಲಕ್ಷ ಕೋವಿಡ್‌ ಪ್ರಕರಣಗಳು ವರದಿಯಾಗಿವೆ. ಈ ಅವಧಿಯಲ್ಲಿ ಪ್ರತಿನಿತ್ಯ ಸರಾಸರಿ 6,687 ಮಂದಿ ಸೋಂಕಿತರಾಗಿರುವುದು ದೃಢಪಟ್ಟಿದೆ. ಸದ್ಯ ರಾಜ್ಯದಲ್ಲಿ ಸೋಂಕು ದೃಢ ಪ್ರಮಾಣ ಶೇ 11.36ರಷ್ಟಿದೆ. ದೇಶದಲ್ಲಿ ಅಧಿಕ ಕೋವಿಡ್‌ ಪ್ರಕರಣಗಳು ವರದಿಯಾದ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ ನಾಲ್ಕನೇ ಸ್ಥಾನದಲ್ಲಿದೆ.

ಕೋವಿಡ್ ಪೀಡಿತರಲ್ಲಿ ಮತ್ತೆ93 ಮಂದಿ ಮೃತಪಟ್ಟಿದ್ದು, ಈವರೆಗೆ ಸಾವಿಗೀಡಾದವರ ಸಂಖ್ಯೆ 4,522ಕ್ಕೆ ತಲುಪಿದೆ.

ADVERTISEMENT

ಸೋಂಕಿತರಲ್ಲಿ ಶುಕ್ರವಾರ 6,561 ಮಂದಿ ಚೇತರಿಸಿಕೊಂಡು ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಇದರಿಂದಾಗಿ ರಾಜ್ಯದಲ್ಲಿ ಒಟ್ಟು ಗುಣಮುಖರಾದವರ ಸಂಖ್ಯೆ 1.76 ಲಕ್ಷಕ್ಕೆ ಏರಿಕೆಯಾಗಿದೆ. ಅಧಿಕ ಗುಣಮುಖರನ್ನು ಹೊಂದಿರುವ ರಾಜ್ಯಗಳ ಸಾಲಿನಲ್ಲಿ ಕೂಡ ಕರ್ನಾಟಕ ನಾಲ್ಕನೇ ಸ್ಥಾನದಲ್ಲಿದೆ.

ಬೆಂಗಳೂರಿನಲ್ಲಿ ಲಕ್ಷ:ಬೆಂಗಳೂರಿನಲ್ಲಿ ಹೊಸದಾಗಿ 2,948 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ ಒಂದು ಲಕ್ಷದ ಗಡಿ ದಾಟಿದೆ. ಬಳ್ಳಾರಿಯಲ್ಲಿ ಮತ್ತೆ 540 ಮಂದಿ ಸೋಂಕಿತರಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 16,740ಕ್ಕೆ ಏರಿಕೆಯಾಗಿದೆ. ಬೆಳಗಾವಿಯಲ್ಲಿ 384, ಉಡುಪಿಯಲ್ಲಿ 278, ದಕ್ಷಿಣ ಕನ್ನಡದಲ್ಲಿ 202 ಹಾಗೂ ಕಲಬುರ್ಗಿಯಲ್ಲಿ 145 ಪ್ರಕರಣಗಳು ವರದಿಯಾಗಿದ್ದು, ಈ ಎಲ್ಲ ಜಿಲ್ಲೆಗಳಲ್ಲಿ ಒಟ್ಟು ಸೋಂಕಿತರ ಸಂಖ್ಯೆ 10 ಸಾವಿರದ ಗಡಿಯತ್ತ ದಾಪುಗಾಲು ಇರಿಸಿದೆ. ಯಾದಗಿರಿ (255), ಧಾರವಾಡ (252), ದಾವಣಗೆರೆ (237), ಕೊಪ್ಪಳ (234), ಶಿವಮೊಗ್ಗ (227), ಹಾವೇರಿ (224), ಜಿಲ್ಲೆಯಲ್ಲಿಯೂ ಅಧಿಕ ಪ್ರಕರಣಗಳು ಹೊಸದಾಗಿ ವರದಿಯಾಗಿವೆ.

ಶುಕ್ರವಾರ ದೃಢಪಟ್ಟ ಮರಣ ಪ್ರಕರಣಗಳಲ್ಲಿ ಬೆಂಗಳೂರು (22), ಬೆಳಗಾವಿ (7), ದಾವಣಗೆರೆ (7), ಕಲಬುರ್ಗಿ (7) ಜಿಲ್ಲೆಯವರು ಅಧಿಕ ಮಂದಿ ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.