ADVERTISEMENT

ಲಾಕ್‌ಡೌನ್‌ ತೆರವು: ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್‌ ಸಂಚಾರ ನಾಳೆಯಿಂದ ಆರಂಭ

​ಪ್ರಜಾವಾಣಿ ವಾರ್ತೆ
Published 21 ಜುಲೈ 2020, 16:17 IST
Last Updated 21 ಜುಲೈ 2020, 16:17 IST
ಬಿಎಂಟಿಸಿ ಬಸ್‌- ಸಾಂಕೇತಿಕ ಚಿತ್ರ
ಬಿಎಂಟಿಸಿ ಬಸ್‌- ಸಾಂಕೇತಿಕ ಚಿತ್ರ   

ಬೆಂಗಳೂರು: ನಗರದಲ್ಲಿ ಬುಧವಾರದಿಂದ ಲಾಕ್‌ಡೌನ್‌ ತೆರವುಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಬಿಎಂಟಿಸಿ ಬಸ್‌ಗಳು ಮತ್ತೆ ಸಂಚಾರ ಆರಂಭಿಸಲಿವೆ.

ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿದ್ದ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಗಳಲ್ಲಿ ಏಳು ದಿನಗಳ ಕಾಲ ಲಾಕ್‌ಡೌನ್‌ ಜಾರಿಗೊಳಿಸಿತ್ತು. ಆ ಕಾರಣ, ಬಿಎಂಟಿಸಿ ಬಸ್‌ಗಳ ಸಂಚಾರಕ್ಕೂ ನಿರ್ಬಂಧ ಹೇರಲಾಗಿತ್ತು.

ಬೆಂಗಳೂರು ನಗರ ಹಾಗೂ ಗ್ರಾಮಂತರ ಜಿಲ್ಲೆಗಳಲ್ಲಿ ಹೇರಲಾಗಿದ್ದ ಲಾಕ್‌ಡೌನ್‌ ಅನ್ನು ಬುಧವಾರದಿಂದ ತೆರವುಗೊಳಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಘೋಷಿಸಿದ್ದಾರೆ. ಆ ಹಿನ್ನೆಲೆಯಲ್ಲಿ ಬಿಎಂಟಿಸಿ ಮತ್ತೆ ಬಸ್‌ ಸಂಚಾರ ಆರಂಭಿಸುವುದಾಗಿ ಹೇಳಿದೆ.

ADVERTISEMENT

ಈ ಬಗ್ಗೆ ಮಾಹಿತಿ ನೀಡಿರುವ ಬೆಂಗಳೂರು ಮಹಾನಗರ ಸಾರಿಗೆ ನಿಗಮವು, 'ಬೆಂಗಳೂರು ನಗರದ ಪ್ರಮುಖ ಮಾರ್ಗಗಳಲ್ಲಿ ಬೆಳಿಗ್ಗೆ 6ರಿಂದ ರಾತ್ರಿ 8ರ ವರೆಗೆ 1500 ಬಿಎಂಟಿಸಿ ಬಸ್‌ಗಳು ಸಂಚರಿಸಲಿವೆ' ಎಂದು ತಿಳಿಸಿದೆ.

ಕಂಟೈನ್‌ಮೆಂಟ್‌ ಜೋನ್‌ಗಳನ್ನು ಹೊರತುಪಡಿಸಿ ಉಳಿದೆಲ್ಲ ಮಾರ್ಗಗಳಲ್ಲಿ ಬಸ್‌ಗಳು ಸಂಚರಿಸಲಿವೆ. ಮುಖಕ್ಕೆ ಮಾಸ್ಕ್‌ ಹಾಕಿರದ ಪ್ರಯಾಣಿಕರಿಗೆ ಬಸ್ ಒಳಗೆ ಪ್ರವೇಶವಿಲ್ಲ ಎಂದು ಬಿಎಂಟಿಸಿ ಸ್ಪಷ್ಟಪಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.