ADVERTISEMENT

Covid-19 Karnataka Update: 18,593 ಸಕ್ರಿಯ ಪ್ರಕರಣ, 253 ಮಂದಿ ಗಂಭೀರ

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2020, 15:51 IST
Last Updated 11 ಡಿಸೆಂಬರ್ 2020, 15:51 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಬೆಂಗಳೂರು: ರಾಜ್ಯದಾದ್ಯಂತ ಕಳೆದ 24 ಗಂಟೆಗಳಲ್ಲಿ 1,210 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 16 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 8,99,011 ಕ್ಕೆ ಏರಿಕೆಯಾಗಿದೆ. ಆ ಪೈಕಿ 11,928 ಮಂದಿ ಸಾವಿಗೀಡಾಗಿದ್ದಾರೆ.

ರಾಜ್ಯದಲ್ಲಿ ಚೇತರಿಕೆ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಿದ್ದು, ಇದುವರೆಗೆ 8,68,471 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ 18,593 ಸಕ್ರಿಯ ಪ್ರಕರಣಗಳಿದ್ದು, 253 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ADVERTISEMENT

ಬೆಂಗಳೂರಿನಲ್ಲಿ ಇಂದು ಒಂದೇ ದಿನ 659 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 1248 ಸೋಂಕಿತರು ಗುಣಮುಖರಾಗಿದ್ದಾರೆ. ಮೈಸೂರಿನಲ್ಲಿ 44, ಮಂಡ್ಯ 26, ಹಾಸನ 45, ತುಮಕೂರು 27, ಚಿಕ್ಕಬಳ್ಳಾಪುರದಲ್ಲಿ 52 ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 35 ಹೊಸ ಪ್ರಕರಣಗಳು ದೃಢಪಟ್ಟಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.