ADVERTISEMENT

Covid-19 Karnataka Update: 8.4 ಲಕ್ಷ ಸೋಂಕಿತರು ಗುಣಮುಖ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 24 ನವೆಂಬರ್ 2020, 19:06 IST
Last Updated 24 ನವೆಂಬರ್ 2020, 19:06 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   
""

ಬೆಂಗಳೂರು: ಕೋವಿಡ್ ಪೀಡಿತರಲ್ಲಿ ಬೆಂಗಳೂರಿನಲ್ಲಿ 1,627 ಮಂದಿ ಸೇರಿ ರಾಜ್ಯದಲ್ಲಿ 1,949 ಮಂದಿಗೆ ಕಾಯಿಲೆ ವಾಸಿಯಾಗಿದೆ. ಇದರಿಂದಾಗಿ ಗುಣಮುಖರ ಸಂಖ್ಯೆ 8.40 ಲಕ್ಷಕ್ಕೆ ತಲುಪಿದೆ.

ರಾಜ್ಯದಲ್ಲಿ ಮಂಗಳವಾರ 1,870 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಸೋಂಕಿಗೀಡಾದವರ ಒಟ್ಟು ಸಂಖ್ಯೆ 8.76 ಲಕ್ಷಕ್ಕೆ ಏರಿಕೆಯಾಗಿದೆ. ಈ ತಿಂಗಳು 24 ದಿನಗಳ ಅವಧಿಯಲ್ಲಿ 53,013 ಮಂದಿ ಕೋವಿಡ್ ಪೀಡಿತರಾಗಿರುವುದು ದೃಢಪಟ್ಟಿದೆ. ಈ ಅವಧಿಯಲ್ಲಿ ಪ್ರತಿನಿತ್ಯ ಸರಾಸರಿ 2,208 ಮಂದಿ ಸೋಂಕಿತರಾಗಿದ್ದಾರೆ. ಕೋವಿಡ್ ಪೀಡಿತರಲ್ಲಿ ಮತ್ತೆ 17 ಮಂದಿ ಮೃತಪಟ್ಟಿದ್ದು, ಈವರೆಗೆ ಸಾವಿಗೀಡಾದವರ ಒಟ್ಟು ಸಂಖ್ಯೆ 11,695ಕ್ಕೆ ಏರಿಕೆಯಾಗಿದೆ.

ಚೇತರಿಸಿಕೊಳ್ಳುವವರ ಸಂಖ್ಯೆ ಹಾಗೂ ಹೊಸ ಕೋವಿಡ್ ಪ್ರಕರಣಗಳ ನಡುವೆ ಅಂತರ ಹೆಚ್ಚಿದ ಪರಿಣಾಮ ಸಕ್ರಿಯ ಪ್ರಕರಣಗಳ ಸಂಖ್ಯೆ 24,612ಕ್ಕೆ ಇಳಿಕೆಯಾಗಿದೆ. ಇವರಲ್ಲಿ 418 ಮಂದಿ ತೀವ್ರ ನಿಗಾ ಘಟಕದಲ್ಲಿದ್ದಾರೆ. ಕಳೆದ 14 ದಿನಗಳ ಅವಧಿಯಲ್ಲಿ 1.35 ಲಕ್ಷ ನೇರ ಸಂಪರ್ಕಿತರು ಹಾಗೂ 1.51 ಲಕ್ಷ ಪರೋಕ್ಷ ಸಂಪರ್ಕಿತರನ್ನು ಪತ್ತೆ ಮಾಡಲಾಗಿದೆ.

ADVERTISEMENT

ಬೆಂಗಳೂರಿನಲ್ಲಿ 927 ಮಂದಿ ಕೋವಿಡ್ ಪೀಡಿತರಾಗಿದ್ದು, ಸೋಂಕಿತರ ಸಂಖ್ಯೆ 3.65 ಲಕ್ಷ ದಾಟಿದೆ. ಮೈಸೂರಿನಲ್ಲಿ ಹೊಸದಾಗಿ 159 ಪ್ರಕರಣಗಳು ಪತ್ತೆಯಾಗಿವೆ. ಅಲ್ಲಿ ಸೋಂಕಿತರ ಸಂಖ್ಯೆ 50,286ಕ್ಕೆ ತಲುಪಿದೆ. ತುಮಕೂರು (95), ಬೆಂಗಳೂರು ಗ್ರಾಮಾಂತರ (89) ಜಿಲ್ಲೆಯಲ್ಲಿ ಪ್ರಕರಣಗಳು ವರದಿಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.