ADVERTISEMENT

ಕೊರೊನಾ ಹಿನ್ನೆಲೆ: ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆ ಮುಂದೂಡಿದ ಕೆಪಿಎಸ್‌ಸಿ‌

​ಪ್ರಜಾವಾಣಿ ವಾರ್ತೆ
Published 24 ಏಪ್ರಿಲ್ 2020, 14:04 IST
Last Updated 24 ಏಪ್ರಿಲ್ 2020, 14:04 IST
   

ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ವೃಂದದ ಹುದ್ದೆಗಳ ನೇಮಕಾತಿಗೆ ಮೇ, ಜೂನ್ ತಿಂಗಳಲ್ಲಿ ನಡೆಸಲು ಉದ್ದೇಶಿಸಿದ ಎಲ್ಲ ಪರೀಕ್ಷೆಗಳನ್ನು ಕರ್ನಾಟಕ ಲೋಕ ಸೇವಾ ಆಯೋಗ (ಕೆಪಿಎಸ್‌ಇ) ಮುಂದೂಡಿದೆ.

ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸಹಾಯಕ ಹಾಗೂ ಪ್ರಥಮ ದರ್ಜೆ ಸಹಾಯಕ, ಗೆಜೆಟೆಡ್ ಪ್ರೊಬೇಷನರಿ ಗ್ರೂಪ್ 'ಎ' ಮತ್ತು ಗ್ರೂಪ್ 'ಬಿ' ವೃಂದದ ಒಟ್ಟು 106 ಹುದ್ದೆಗಳು, ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಗ್ರೂಪ್ 'ಎ' ವೃಂದ 54 ಹುದ್ದೆಗಳು ಮತ್ತು ವಿವಿಧ ಇಲಾಖೆಗಳ ಕಿರಿಯ ಸಹಾಯಕ ಹುದ್ದೆಗಳ ನೇಮಕಾತಿಗೆ ಹೊರಡಿಸಲಾದ ಅಧಿಸೂಚನೆಯಲ್ಲಿರುವ ಪರೀಕ್ಷಾ ದಿನವನ್ನು ಮುಂದೂಡಲಾಗಿದೆ.

'ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಲಾಕ್ ಡೌನ್ ಅವಧಿ ಮುಗಿದ ಬಳಿಕ ಪರೀಕ್ಷಾ ದಿನಾಂಕ ನಿಗದಿಪಡಿಸಲಾಗುವುದು' ಎಂದು ಕೆಪಿಎಸ್ಸಿ ಕಾರ್ಯದರ್ಶಿ ಜಿ. ಸತ್ಯವತಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.