ADVERTISEMENT

ಕೋವಿಡ್‌-19: ಪಿಯುಸಿ ಉಪನ್ಯಾಸಕರಿಗೆ ಕ್ವಾರಂಟೈನ್‌ ಗಸ್ತು

​ಪ್ರಜಾವಾಣಿ ವಾರ್ತೆ
Published 20 ಜೂನ್ 2020, 20:36 IST
Last Updated 20 ಜೂನ್ 2020, 20:36 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಬೆಂಗಳೂರು: ಕೊರೊನಾ ಸೋಂಕಿಗೆ ಒಳಗಾದ ಹಾಗೂ ಸೋಂಕಿತರ ಸಂಪರ್ಕದ ಶಂಕೆಯ ಮೇಲೆ ಮನೆಯಲ್ಲೇ ಕ್ವಾರಂಟೈನ್‌ಗೆ ಒಳಗಾದ ವರ ಮೇಲೆ ನಿಗಾ ಇರಿಸುವ ಕೆಲಸಕ್ಕೆ ಸರ್ಕಾರಿ ಮತ್ತು ಅನುದಾನಿತ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರು ಮತ್ತು ಉಪನ್ಯಾಸಕರನ್ನು ನಿಯೋಜಿಸಲು ಸೂಚಿಸಲಾಗಿದೆ.

ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು (ಪರೀಕ್ಷೆ) ಈ ಸಂಬಂಧ ಶನಿವಾರ ಸುತ್ತೋಲೆ ಹೊರಡಿಸಿದ್ದಾರೆ.

ಬೆಂಗಳೂರು ಉತ್ತರ, ದಕ್ಷಿಣ, ಗ್ರಾಮಾಂತರ, ರಾಮನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮೌಲ್ಯಮಾಪನ ಕರ್ತವ್ಯಕ್ಕೆ ಹಾಜರಾಗದ ಉಪನ್ಯಾಸಕರು ಮತ್ತು ಪ್ರಾಂಶುಪಾಲರ ಪಟ್ಟಿ ಸಿದ್ಧಪಡಿಸಿ ಕೊಡುವಂತೆ ಆಯಾ ಜಿಲ್ಲೆಗಳ ಉಪ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.