ADVERTISEMENT

ಕೋವಿಡ್‌ ಮೂರನೇ ಅಲೆ: ಮಕ್ಕಳ ರಕ್ಷಣೆಗೆ ಒತ್ತು- ಸಿಎಂ ಭರವಸೆ

​ಪ್ರಜಾವಾಣಿ ವಾರ್ತೆ
Published 12 ಜೂನ್ 2021, 13:43 IST
Last Updated 12 ಜೂನ್ 2021, 13:43 IST
ಬಿ.ಎಸ್‌.ಯಡಿಯೂರಪ್ಪ
ಬಿ.ಎಸ್‌.ಯಡಿಯೂರಪ್ಪ   

ಶಿವಮೊಗ್ಗ: ಕೋವಿಡ್ ಮೂರನೇ ಅಲೆ ಮಕ್ಕಳ ಮೇಲೆ ದುಷ್ಪರಿಣಾಮ ಬೀರದಂತೆ ಸರ್ಕಾರ ಎಲ್ಲ ರೀತಿಯ ಮುಂಜಾಗ್ರತಾ ಕ್ರಮ ಕೈಗೊಳ್ಳುತ್ತಿದೆ. ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಜ್ಞರ ಸಮಿತಿ ಮೂರ್‍ನಾಲ್ಕು ದಿನಗಳಲ್ಲಿ ವರದಿ ನೀಡಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ನಗರದಲ್ಲಿ ಶನಿವಾರ ಅವರು ಸುದ್ದಿಗಾರರ ಜತೆ ಮಾತನಾಡಿದರು.

ರಾಜ್ಯದಲ್ಲಿ ವೈದ್ಯಕೀಯ ಮೂಲಸೌಲಭ್ಯ ಹೆಚ್ಚಿಸಲಾಗುತ್ತಿದೆ. ಇದೇ ಮೊದಲ ಬಾರಿ ಒಂದೇ ಹಂತದಲ್ಲಿ 1,780 ವೈದ್ಯರ ನೇರ ನೇಮಕಾತಿ ಮಾಡಲಾಗಿದೆ. ಕೊರೊನಾ ಪಾಸಿಟಿವಿಟಿ ದರವನ್ನು ಶೇ 5ರ ಒಳಗೆ ತರಲು ಶ್ರಮಿಸಲಾಗುತ್ತಿದೆ ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.