ADVERTISEMENT

ಕೊರೊನಾ|ಎಸ್ಸೆಸ್ಸೆಲ್ಸಿ ಪರೀಕ್ಷೆ ಬಗ್ಗೆ 23ಕ್ಕೆ ಅಂತಿಮ ತೀರ್ಮಾನ: ಸುರೇಶ್ ಕುಮಾರ್

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2020, 7:56 IST
Last Updated 21 ಮಾರ್ಚ್ 2020, 7:56 IST
   

ಚಾಮರಾಜನಗರ: ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಬಗ್ಗೆ 23ರಂದು ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದರು.

ಸೋಮವಾರ ಆರೋಗ್ಯ ಸಚಿವರು ಹಾಗೂ ವೈದ್ಯಕೀಯ ಶಿಕ್ಷಣ ಸಚಿವರೊಂದಿಗೆ ಚರ್ಚೆ ನಡೆಸಿ, ಪರಿಸ್ಥಿತಿಯನ್ನು ಅವಲೋಕಿಸಲಾಗುವುದು. ಜೊತೆಗೆ, ಮುಖ್ಯಮಂತ್ರಿ ಅವರೊಂದಿಗೂ ಚರ್ಚಿಸುತ್ತೇವೆ ಆ ಬಳಿಕ ನಿರ್ಧಾರ ಪ್ರಕಟಿಸಲಾಗುವುದು ಎಂದರು.

27ರಿಂದ ಪರೀಕ್ಷೆ ಆರಂಭವಾಗಬೇಕಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.