ADVERTISEMENT

ಕೊರೊನಾ ಸೇವೆಗೆ 500 ಓಲಾ ಕ್ಯಾಬ್‌: ಡಾ. ಸಿ.ಎನ್‌. ಅಶ್ವತ್ಥನಾರಾಯಣ

​ಪ್ರಜಾವಾಣಿ ವಾರ್ತೆ
Published 29 ಮಾರ್ಚ್ 2020, 20:15 IST
Last Updated 29 ಮಾರ್ಚ್ 2020, 20:15 IST
ಡಾ. ಸಿ.ಎನ್‌. ಅಶ್ವತ್ಥನಾರಾಯಣ
ಡಾ. ಸಿ.ಎನ್‌. ಅಶ್ವತ್ಥನಾರಾಯಣ   

ಬೆಂಗಳೂರು: ಕೊರೊನಾ ಸಂಬಂಧಿತ ಸೇವೆಗಳಿಗಾಗಿ 500 ವಾಹನಗಳನ್ನು ನೀಡಲು ಓಲಾ ಸಂಸ್ಥೆ ಮುಂದಾಗಿದೆ.

ಉಪಮುಖ್ಯಮಂತ್ರಿ ಡಾ. ಸಿ. ಎನ್‌ ಅಶ್ವತ್ಥನಾರಾಯಣ ಅವರಿಗೆ ಭಾನುವಾರ ಕರೆ ಮಾಡಿದ್ದ ಓಲಾ ಸಂಸ್ಥಾಪಕ ಭವಿಶ್‌ ಅರ್ಗವಾಲ್‌, ’ಸರ್ಕಾರ ತನ್ನ ಅಗತ್ಯಕ್ಕೆ ತಕ್ಕಂತೆ ಸಂಸ್ಥೆಯ 500 ಕ್ಯಾಬ್‌ಗಳನ್ನು ಬಳಸಿಕೊಳ್ಳಬಹುದು‘ ಎಂದು ತಿಳಿಸಿದ್ದಾರೆ.

ಓಲಾ ಕ್ಯಾಬ್‌ಗಳು ಬೆಂಗಳೂರು, ಮೈಸೂರು, ಮಂಗಳೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿಯಲ್ಲಿ ಕಾರ್ಯನಿರ್ವಹಿಸುತ್ತಿವೆ. ಯಾವ ಜಿಲ್ಲೆಗಳಿಗೆ ಎಷ್ಟು ಕ್ಯಾಬ್‌ಗಳನ್ನು ಬಳಸಿಕೊಳ್ಳಬೇಕು ಎಂಬುದನ್ನು ಸರ್ಕಾರ ನಿರ್ಧರಿಸಲಿದೆ.

ADVERTISEMENT

ಓಲಾ ಕ್ಯಾಬ್ ಸೇವೆ ಬಳಸಿಕೊಳ್ಳುವ ಕುರಿತಂತೆ ಆಯಾ ಜಿಲ್ಲೆಗಳ ಅಧಿಕಾರಿಗಳ ಜತೆ ಮಾತುಕತೆ ನಡೆಸಿರುವ ಉಪ ಮುಖ್ಯಮಂತ್ರಿ, ಕೊರೊನಾ ಸಂಬಂಧಿತ ಸೇವೆಗಳಿಗೆ ಯಾವುದೇ ಸಂದರ್ಭದಲ್ಲಿ ಬೇಕಾದರೂ ಓಲಾ ಕ್ಯಾಬ್‌ ಬಳಸಿಕೊಳ್ಳುವಂತೆ ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.