ADVERTISEMENT

ಕೊಡಗಿನ ವ್ಯಕ್ತಿಗೆ ಕೊರೊನಾ ಸೋಂಕು‌ ದೃಢ: ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 15 

​ಪ್ರಜಾವಾಣಿ ವಾರ್ತೆ
Published 19 ಮಾರ್ಚ್ 2020, 5:44 IST
Last Updated 19 ಮಾರ್ಚ್ 2020, 5:44 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   
""

ಮಡಿಕೇರಿ: ಇಲ್ಲಿನ ಜಿಲ್ಲಾ ಆಸ್ಪತ್ರೆಯ ಪ್ರತ್ಯೇಕ ವಾರ್ಡ್‌ನಲ್ಲಿ ನಿಗಾ ವಹಿಸಲಾಗಿದ್ದ ವ್ಯಕ್ತಿಗೆ ಕೊರೊನಾ ಸೋಂಕು‌ ತಗುಲಿರುವುದು ದೃಢಪಟ್ಟಿದೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರು ಗುರುವಾರ ಟ್ವೀಟ್ ಮಾಡಿದ್ದಾರೆ.

ಆ ವ್ಯಕ್ತಿ ಸೌದಿಯಿಂದ ಕೊಡಗಿಗೆ ವಾಪಸ್ಸಾಗಿದ್ದರು ಎನ್ನಲಾಗಿದೆ . ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ.

ಜಿಲ್ಲಾ ಆಸ್ಪತ್ರೆಯಲ್ಲಿ ನಾಲ್ವರು ಶಂಕಿತರು‌ ಇದ್ದಾರೆ. ಅದರಲ್ಲಿ ಯಾರಿಗೆ ಸೋಂಕು ದೃಢವಾಗಿದೆ ಎಂಬ ಗೊಂದಲವಿದೆ. ಮಾಹಿತಿಗೆ ಜಿಲ್ಲಾಡಳಿತ ಪರದಾಡುತ್ತಿದೆ. ಸಚಿವರ ಟ್ವೀಟ್ ಬಳಿಕ ಜಿಲ್ಲಾಧಿಕಾರಿ ಹಾಗೂ ಡಿಎಚ್ಒ‌ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಬುಧವಾರ ಮತ್ತೊಬ್ಬ ವ್ಯಕ್ತಿಯ ವೈದ್ಯಕೀಯ ವರದಿ ಬಂದಿತ್ತು.‌ಅದು ‌ನೆಗೆಟಿವ್ ಬಂದಿತ್ತು.‌ ಮತ್ತೊಬ್ಬ ವ್ಯಕ್ತಿಯ ವೈದ್ಯಕೀಯ ವರದಿ ಪಾಸಿಟಿವ್ ಬಂದಿದ್ದು ಕೊಡಿನಲ್ಲೂ ಆತಂಕ ಮೂಡಿಸಿದೆ.

ಜಿಲ್ಲಾ ಆಸ್ಪತ್ರೆಯಲ್ಲಿ 22 ಬೆಡ್‌ನ ಪ್ರತ್ಯೇಕ ವಾರ್ಡ್ ಸಜ್ಜು ಮಾಡಲಾಗಿದೆ.

ADVERTISEMENT

ಈವರೆಗೂ ರಾಜ್ಯದಲ್ಲಿ ಪತ್ತೆಯಾಗಿರುವ 15ನೇ ಕೋವಿಡ್‌–19 ಪ್ರಕರಣ ಇದಾಗಿದೆ.

ಪ್ರತ್ಯೇಕ ವಾರ್ಡ್ ವ್ಯವಸ್ಥೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.