ADVERTISEMENT

ತರೀಕೆರೆಯಲ್ಲಿ ಮಹಿಳೆಗೆ ಕೊರೊನಾ ವೈರಾಣು ಸೋಂಕು ಶಂಕೆ

​ಪ್ರಜಾವಾಣಿ ವಾರ್ತೆ
Published 17 ಮಾರ್ಚ್ 2020, 15:36 IST
Last Updated 17 ಮಾರ್ಚ್ 2020, 15:36 IST
   

ಚಿಕ್ಕಮಗಳೂರು: ದುಬೈನಿಂದ ಬಂದಿದ್ದ ಮಹಿಳೆಗೆ ಜ್ವರ, ಶೀತ, ಕೆಮ್ಮು ಕಾಣಿಸಿಕೊಂಡಿದ್ದು ಕೊರೊನಾ ವೈರಾಣು ಸೋಂಕು ಶಂಕೆ ಮೇರೆಗೆ ಮಂಗಳವಾರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

‘ಮಹಿಳೆಯ ಗಂಟಲಿನ ದ್ರವ, ರಕ್ತದ ಮಾದರಿಯನ್ನು ಶಿವಮೊಗ್ಗದ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ. ಜಿಲ್ಲಾಸ್ಪತ್ರೆಯಲ್ಲಿ ಸ್ಥಾಪಿಸಿರುವ ಪ್ರತ್ಯೇಕ ವಾರ್ಡ್‌ನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ’ ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್‌ ‘ಪ್ರಜಾವಾಣಿ’ಗೆ ತಿಳಿಸಿದರು.

ಈ ಮಹಿಳೆ ತರೀಕೆರೆ ತಾಲ್ಲೂಕಿನ ಗ್ರಾಮವೊಂದಕ್ಕೆ ದುಬೈನಿಂದ ಬಂದಿದ್ದರು. ಜಿಲ್ಲೆಯಲ್ಲಿ ಕೊರೊನಾ ವೈರಾಣು ಸೋಂಕು ಶಂಕೆಯ ಮೂರನೇ ಪ್ರಕರಣ ಇದು. ಎರಡು ಪ್ರಕರಣಗಳಲ್ಲಿ ಸೋಂಕು ದೃಢಪಟ್ಟಿಲ್ಲ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.