ಬೆಂಗಳೂರು: ಮಂಗಳವಾರ ಸಂಜೆ 5 ಗಂಟೆಯಿಂದಬುಧವಾರ ಸಂಜೆ5 ಗಂಟೆ ವರೆಗಿನ ಅವಧಿಯಲ್ಲಿರಾಜ್ಯದಾದ್ಯಂತ 2,062 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 54 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆತಿಳಿಸಿದೆ.
ಇದರೊಂದಿಗೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 28, 877ಕ್ಕೆ ಏರಿಕೆಯಾಗಿದೆ. ಇದುವರೆಗೆ 470 ಮಂದಿ ಸಾವಿಗೀಡಾಗಿದ್ದಾರೆ.
ಇದುವರೆಗೆ 11876 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಸದ್ಯ ರಾಜ್ಯದಲ್ಲಿ 16, 527 ಸಕ್ರಿಯ ಪ್ರಕರಣಗಳು ಇವೆ.
ಬೆಂಗಳೂರಿನಲ್ಲಿ ಇಂದು ಒಂದೇ ದಿನ ಅತಿ ಹೆಚ್ಚು (1148) ಪ್ರಕರಣಗಳು ಪತ್ತೆಯಾಗಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.