ADVERTISEMENT

Covid-19 Karnataka Update | ಒಂದೇ ದಿನ 1843 ಪ್ರಕರಣ, ಬೆಂಗಳೂರಿನಲ್ಲಿ 981

ರಾಜ್ಯದಲ್ಲಿ 25 ಸಾವಿರ ದಾಟಿದ ಸೋಂಕಿತರ ಸಂಖ್ಯೆ

​ಪ್ರಜಾವಾಣಿ ವಾರ್ತೆ
Published 6 ಜುಲೈ 2020, 15:19 IST
Last Updated 6 ಜುಲೈ 2020, 15:19 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   
""

ಬೆಂಗಳೂರು: ಬೆಂಗಳೂರಿನಲ್ಲಿ 981 ಸೇರಿದಂತೆ ಸೋಮವಾರ ಒಂದೇ ದಿನ ರಾಜ್ಯದಲ್ಲಿ 1843 ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 25,317ಕ್ಕೆ ತಲುಪಿದೆ.

ಸೋಂಕಿನಿಂದ ಬಳಲುತ್ತಿದ್ದವರಲ್ಲಿ ಸೋಮವಾರ 30 ಮಂದಿ ಮೃತಪಟ್ಟಿದ್ದಾರೆ. ಇದರಿಂದಾಗಿ ಕೋವಿಡ್‌ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಸಾವಿಗೀಡಾದವರ ಸಂಖ್ಯೆ 401ಕ್ಕೆ ತಲುಪಿದೆ. ಬೆಂಗಳೂರಿನಲ್ಲಿ 278 ಸೇರಿದಂತೆ 680 ಮಂದಿ ಚೇತರಿಸಿಕೊಂಡು ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಈವರೆಗೆ ಒಟ್ಟು 10,527 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಸದ್ಯ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 14,385ಕ್ಕೆ ಏರಿಕೆಯಾಗಿದೆ. ರಾಜ್ಯದ 29 ಜಿಲ್ಲೆಗಳಲ್ಲಿ ಹೊಸದಾಗಿ ಪ್ರಕರಣಗಳು ವರದಿಯಾಗಿದ್ದು, ಬೆಂಗಳೂರಿನಲ್ಲಿ ಗರಿಷ್ಠ ಪ್ರಕರಣಗಳು ದೃಢಪಟ್ಟಿವೆ.

ADVERTISEMENT

ಉಳಿದಂತೆ, ಹಾವೇರಿಯಲ್ಲಿ 99, ಉತ್ತರ ಕನ್ನಡದಲ್ಲಿ 81, ಬೆಂಗಳೂರು ಗ್ರಾಮಾಂತರ 68 ಪ್ರಕರಣಗಳು ದೃಢಪಟ್ಟಿವೆ.

ಹೊಸ ಪ್ರಕರಣಗಳ ಜಿಲ್ಲಾವರು ಮಾಹಿತಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.