ADVERTISEMENT

Covid-19 Karnataka Update: ರಾಜ್ಯದಲ್ಲಿ 9,886 ಹೊಸ ಕೋವಿಡ್ ಪ್ರಕರಣ

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2020, 16:29 IST
Last Updated 3 ಅಕ್ಟೋಬರ್ 2020, 16:29 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   
""

ಬೆಂಗಳೂರು: ರಾಜ್ಯದಲ್ಲಿ 24 ಗಂಟೆ ಅವಧಿಯಲ್ಲಿ 9,886 ಹೊಸ ಕೊರೊನಾ ಪ್ರಕರಣಗಳು ದೃಢಪಟ್ಟಿವೆ. 100 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ. 8,989 ಮಂದಿ ಇಂದು ಗುಣಮುಖರಾಗಿದ್ದಾರೆ.

ಇದರೊಂದಿಗೆ ರಾಜ್ಯದಲ್ಲಿ ಈವರೆಗೆ ಸೋಂಕು ತಗುಲಿದವರ ಸಂಖ್ಯೆ 6,30,516ಕ್ಕೆ ಏರಿಕೆಯಾಗಿದೆ. ಈವರೆಗೆ 9,219 ಜನ ಅಸುನೀಗಿದ್ದು, 5,08,495 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಸದ್ಯ 1,12,783 ಸಕ್ರಿಯ ಪ್ರಕರಣಗಳಿವೆ. 841 ಮಂದಿ ತೀವ್ರ ನಿಗಾ ಘಟಕಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಜಧಾನಿ ಬೆಂಗಳೂರಿನಲ್ಲಿ 3,925 ಹೊಸ ಪ್ರಕರಣಗಳು ವರದಿಯಾಗಿದ್ದು, 21 ಜನ ಸಾವಿಗೀಡಾಗಿದ್ದಾರೆ. ನಗರದಲ್ಲಿ ಈವರೆಗೆ ಸೋಂಕು ತಗುಲಿದವರ ಸಂಖ್ಯೆ 2,45,700ಕ್ಕೆ ತಲುಪಿದೆ. 53,292 ಸಕ್ರಿಯ ಪ್ರಕರಣಗಳಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.