ADVERTISEMENT

ಕೊರೊನಾ ಸೋಂಕಿನಿಂದ ಕಲ್ಬುರ್ಗಿಯಲ್ಲಿ ವ್ಯಕ್ತಿ ಸಾವು

​ಪ್ರಜಾವಾಣಿ ವಾರ್ತೆ
Published 27 ಏಪ್ರಿಲ್ 2020, 13:55 IST
Last Updated 27 ಏಪ್ರಿಲ್ 2020, 13:55 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಕಲ್ಬುರ್ಗಿ: ರಾಜ್ಯದಲ್ಲಿ ಕೋವಿಡ್ 19 ಸೋಂಕಿತ ಮತ್ತೊಬ್ಬ ವ್ಯಕ್ತಿಸಾವನ್ನಪ್ಪಿದ್ದಾರೆ.

ಮೃತಪಟ್ಟ ವ್ಯಕ್ತಿ 57 ವರ್ಷದ ಆಳಂದದ ನಿವಾಸಿಯಾಗಿದ್ದಾರೆ.ಏಪ್ರಿಲ್ 21ರಂದು ಇವರಿಗೆ ಕೊರೊನಾ ಪಾಸಿಟಿವ್ ಎಂದು ವರದಿಬಂದಿತ್ತು. ಇವರನ್ನು ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ಯಕೃತ್ತಿನ ಸಮಸ್ಯೆಯಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.ಇದರೊಂದಿಗೆ ಕಲ್ಬುರ್ಗಿಯಲ್ಲಿ ಕೊರೊನಾ ಸೋಂಕು ತಗುಲಿ ಮೃತಪಟ್ಟವರ ಸಂಖ್ಯೆ 5ಕ್ಕೇರಿದೆ ಎಂದುವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT