ADVERTISEMENT

ಶಿವಮೊಗ್ಗ | ಆರೋಗ್ಯ ತಪಾಸಣೆ ಬಳಿಕ 289 ಮಂದಿಗೆ ವಿಶೇಷ ಕ್ವಾರೆಂಟೈನ್‍

​ಪ್ರಜಾವಾಣಿ ವಾರ್ತೆ
Published 9 ಮೇ 2020, 14:03 IST
Last Updated 9 ಮೇ 2020, 14:03 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಶಿವಮೊಗ್ಗ: ಒಂದು ವಾರದ ಅವಧಿಯಲ್ಲಿ ಜಿಲ್ಲೆಗೆ ಹೊರ ರಾಜ್ಯಗಳಿಂದ ಬಂದ 289 ಮಂದಿಯ ಆರೋಗ್ಯ ತಪಾಸಣೆ ನಡೆಸಿದ ಬಳಿಕ ವಿಶೇಷ ಕ್ವಾರೆಂಟೈನ್‍ಗೆ ಒಳಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದರು.

ಎರಡು ದಿನಗಳಲ್ಲಿ ಅತಿ ಹೆಚ್ಚಿನ ಕೊರೊನಾ ಪ್ರಕರಣಗಳು ಕಂಡು ಬಂದಿರುವ ಕೆಂಪು ವಲಯದ 7 ರಾಜ್ಯಗಳಿಂದ 148 ಜನರು ಜಿಲ್ಲೆಗೆ ಬಂದಿದ್ದಾರೆ. ಇವರಲ್ಲಿ ತೆಲಂಗಾಣದಿಂದ 13, ಕೇರಳದಿಂದ 2, ಗೋವಾದಿಂದ 73, ಮಹಾರಾಷ್ಟ್ರ 12, ತಮಿಳುನಾಡು 23, ರಾಜಸ್ಥಾನ 16, ಗುಜರಾತ್‌ನ 9 ಮಂದಿ ಇದ್ದಾರೆ ಇವರನ್ನು ಸಾಂಸ್ಥಿಕ ಕ್ವಾರೆಂಟೈನ್‍ಗೆ ಒಳಪಡಿಸಲಾಗಿದೆ. ಇತರೆ ರಾಜ್ಯಗಳಿಂದ ಬಂದವರನ್ನು ಹೋಂ ಕ್ವಾರೆಂಟೈನ್‍ಗೆ ಕಳುಹಿಸಲಾಗಿದೆ. ಪ್ರತಿಯೊಬ್ಬರ ಮೇಲೆ ನಿರಂತರ ನಿಗಾ ಇರಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಜಿಲ್ಲೆಗೆ ಬರುವ ಪ್ರತಿಯೊಬ್ಬರನ್ನೂ ಕುವೆಂಪು ವಿಶ್ವವಿದ್ಯಾಲಯದ ಸಹ್ಯಾದ್ರಿ ಕಾಲೇಜು ಕ್ರೀಡಾಂಗಣದಲ್ಲಿ ಸಮಗ್ರವಾಗಿ ಆರೋಗ್ಯ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಬಳಿಕ ಕ್ವಾರೆಂಟೈನ್‍ಗೆ ಒಳಪಡಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ADVERTISEMENT

ಬೇರೆ ರಾಜ್ಯಗಳಿಂದ ಬಂದವರ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಗೊಂದಲ ಹುಟ್ಟಿಸುವಂತಹ, ಸಮಾಜದಲ್ಲಿ ಒಡಕು ಮೂಡಿಸುವ, ವದಂತಿಗಳನ್ನು ಹರಡುವ, ಸಂದೇಶ ಹಾಕುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.