ADVERTISEMENT

Covid-19 Karnataka Update: ರಾಜ್ಯದಲ್ಲಿ 10,453 ಹೊಸ ಕೊರೊನಾ ಪ್ರಕರಣ

​ಪ್ರಜಾವಾಣಿ ವಾರ್ತೆ
Published 29 ಸೆಪ್ಟೆಂಬರ್ 2020, 16:04 IST
Last Updated 29 ಸೆಪ್ಟೆಂಬರ್ 2020, 16:04 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   
""
""

ಬೆಂಗಳೂರು: ರಾಜ್ಯದಲ್ಲಿ 24 ಗಂಟೆ ಅವಧಿಯಲ್ಲಿ 10,453 ಹೊಸ ಕೊರೊನಾ ಪ್ರಕರಣಗಳು ದೃಢಪಟ್ಟಿವೆ. 136 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ. 6,628 ಮಂದಿ ಇಂದು ಗುಣಮುಖರಾಗಿದ್ದಾರೆ.

ಇದರೊಂದಿಗೆ ರಾಜ್ಯದಲ್ಲಿ ಈವರೆಗೆ ಸೋಂಕು ತಗುಲಿದವರ ಸಂಖ್ಯೆ 5,92,911ಕ್ಕೆ ಏರಿಕೆಯಾಗಿದೆ. ಈವರೆಗೆ 8,777 ಜನ ಅಸುನೀಗಿದ್ದು, 4,76,378 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಸದ್ಯ 1,07,737 ಸಕ್ರಿಯ ಪ್ರಕರಣಗಳಿವೆ. 815 ಮಂದಿ ತೀವ್ರ ನಿಗಾ ಘಟಕಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಜಧಾನಿ ಬೆಂಗಳೂರಿನಲ್ಲಿ ಅತಿಹೆಚ್ಚು, ಅಂದರೆ 4,868 ಹೊಸ ಪ್ರಕರಣಗಳು ವರದಿಯಾಗಿದ್ದು, 67 ಜನ ಸಾವಿಗೀಡಾಗಿದ್ದಾರೆ. ನಗರದಲ್ಲಿ ಈವರೆಗೆ ಸೋಂಕು ತಗುಲಿದವರ ಸಂಖ್ಯೆ 2,28,437ಕ್ಕೆ ತಲುಪಿದೆ. 46,610 ಸಕ್ರಿಯ ಪ್ರಕರಣಗಳಿವೆ.

ಜಿಲ್ಲಾವಾರು ಹೊಸ ಪ್ರಕರಣಗಳ ವಿವರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.