ADVERTISEMENT

ಕಾಂಗ್ರೆಸ್‌ ಶಾಸಕರು, ಸಂಸದರು ತಲಾ ₹ 1 ಲಕ್ಷ ದೇಣಿಗೆ ನೀಡಲು ಸಿದ್ಧರಾಮಯ್ಯ ಮನವಿ

​ಪ್ರಜಾವಾಣಿ ವಾರ್ತೆ
Published 1 ಏಪ್ರಿಲ್ 2020, 8:50 IST
Last Updated 1 ಏಪ್ರಿಲ್ 2020, 8:50 IST
   

ಬೆಂಗಳೂರು: ಕೆಪಿಸಿಸಿ ಆರಂಭಿಸಿರುವ ಕೊರೊನ ಪರಿಹಾರ ನಿಧಿಗೆ ವೈಯಕ್ತಿಕವಾಗಿ ತಲಾ ಕನಿಷ್ಠಒಂದು ಲಕ್ಷ ರೂ.ಗಳನ್ನು ದೇಣಿಗೆಯಾಗಿ ನೀಡುವಂತೆ ಕಾಂಗ್ರೆಸ್ ಪಕ್ಷದ ಶಾಸಕರು, ಸಂಸದರಿಗೆ ವಿಧಾನಸಭೆಯ ವಿರೋಧ ಪಕ್ಷದನಾಯಕರಾದ ಸಿದ್ದರಾಮಯ್ಯ ಅವರು ಮನವಿ ಮಾಡಿದ್ದಾರೆ.

ಕೊರೊನ ವೈರಸ್ ರಾಜ್ಯದ ಜನತೆಯನ್ನು ತೀವ್ರ ಸಂಕಷ್ಟಕ್ಕೀಡು ಮಾಡಿದೆ. ಇದರಿಂದಾಗಿ ದುಡಿಯುವ ವರ್ಗಕ್ಕೆ ಉದ್ಯೋಗಗಳಿಲ್ಲದೆ ಆಹಾರ,ನೀರು,ಔಷಧಿಗಳಿಗೆ ಪರದಾಡಬೇಕಾದ ಪರಿಸ್ಥಿತಿ ಉಂಟಾಗಿದೆ. ಮೊದಲೇ ಪ್ರವಾಹದಿಂದ ನಲುಗಿದ್ದ ನಾಡಿನ ರೈತ,ಕೂಲಿ ಕಾರ್ಮಿಕರನ್ನೂ ಸಹ ಈ ವೈರಸ್ ಕಂಗೆಡುವಂತೆ ಮಾಡಿದೆ ಎಂದರು.

ಈ ಸಂದರ್ಭದಲ್ಲಿ ಕೇಂದ್ರ-ರಾಜ್ಯ ಸರ್ಕಾರಗಳೆರಡೂ ಸನ್ನಿವೇಶವನ್ನು ಸಮರ್ಪಕವಾಗಿ ನಿಭಾಯಿಸಬೇಕಾಗಿತ್ತು. ಆದರೆ ಎರಡೂ ಸರ್ಕಾರಗಳಿಂದ ಪರಿಹಾರ ಕಾರ್ಯ ಸೂಕ್ತವಾಗಿ ನಡೆಯುತ್ತಿಲ್ಲ ಎಂದು ಆರೋಪಿಸಿದರು.

ಈ ಸಂದರ್ಭದಲ್ಲಿ ನಾವೆಲ್ಲರೂ ಜನ ಕಂಗೆಡದಂತೆ ಅವರ ಜೊತೆ ನಿಂತು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕಾಗಿದೆ.ಆದ್ದರಿಂದ ನಮ್ಮ ಪಕ್ಷದ ಶಾಸಕರು, ಸಂಸದರು ವೈಯಕ್ತಕವಾಗಿ ತಲಾ ಕನಿಷ್ಠ ಒಂದು ಲಕ್ಷ ರೂ. ಗಳ ದೇಣಿಗೆ ನೀಡಬೇಕೆಂದು ಕೋರುತ್ತೇನೆ ಎಂದರು.

ADVERTISEMENT

ಶಾಸಕರುತಮ್ಮ ತಮ್ಮ ಕ್ಷೇತ್ರಗಳಲ್ಲಿದ್ದುಕೊಂಡು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕೆಂದುಸಿದ್ದರಾಮಯ್ಯ ಅವರು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.