ADVERTISEMENT

ಮುಖಗವಸು: ಸುಲಿಗೆ ನಡೆಸಿದರೆ ಕ್ರಮ: ಸಚಿವ ಡಾ.ಕೆ.ಸುಧಾಕರ್ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 5 ಮಾರ್ಚ್ 2020, 19:51 IST
Last Updated 5 ಮಾರ್ಚ್ 2020, 19:51 IST
ಡಾ.ಕೆ.ಸುಧಾಕರ್
ಡಾ.ಕೆ.ಸುಧಾಕರ್   

ಬೆಂಗಳೂರು:‘ಮುಖಗವಸುಗಳ (ಮಾಸ್ಕ್‌) ಬೆಲೆ ಏರಿಕೆ ಮಾಡುತ್ತಿರುವ ಕಂಪನಿಗಳು ಹಾಗೂ ವಿತರಕರ ವಿರುದ್ಧಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಎಚ್ಚರಿಕೆ ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೆಲವರು ಮಾಸ್ಕ್‌ಗಳು ಮತ್ತು ಔಷಧಿಗಳ ಕೊರತೆ ಸೃಷ್ಟಿಸಿ, ಬೆಲೆ ಏರಿಕೆ ಮಾಡುತ್ತಿರುವುದು ಗಮನಕ್ಕೆ ಬಂದಿದೆ’ ಎಂದು ಹೇಳಿದರು.

ಆರೋಗ್ಯ ಇಲಾಖೆಯ ಆಯುಕ್ತ ಪಂಕಜ್‌ಕುಮಾರ್ ಪಾಂಡೆ, ‘ಮಾಸ್ಕ್‌ಗ‌ಳಿಗೆ ಹೆಚ್ಚಿನ ಹಣ ವಸೂಲಿ ಮಾಡಿದಲ್ಲಿ ಆರೋಗ್ಯ ಸಹಾಯವಾಣಿ 104ಕ್ಕೆ ದೂರು ಸಲ್ಲಿಸಿ ಎಂದ ಅವರು, 4 ಲಕ್ಷ ಸರ್ಜಿಕಲ್‌ ಮಾಸ್ಕ್‌ಗಳು ಹಾಗೂ 40 ಸಾವಿರ ಎನ್‌–95 ಮಾಸ್ಕ್‌ಗಳು ಲಭ್ಯವಿದೆ’ ಎಂದು ತಿಳಿಸಿದರು.

ADVERTISEMENT

ಕಾರ್ಮಿಕರು ಸೋಂಕಿಗೆ ಒಳಗಾದಲ್ಲಿ 28 ದಿನಗಳು ವೇತನ ಸಹಿತ ರಜೆ ನೀಡುವಂತೆ ರಾಜ್ಯ ಕಾರ್ಮಿಕ ಇಲಾಖೆ ಸುತ್ತೋಲೆ ಹೊರಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.