ADVERTISEMENT

ಕೋವಿಡ್‌–19: ತುಮಕೂರಿನ ವ್ಯಕ್ತಿಗೆ ಸೋಂಕು ದೃಢ, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 84

​ಪ್ರಜಾವಾಣಿ ವಾರ್ತೆ
Published 30 ಮಾರ್ಚ್ 2020, 9:07 IST
Last Updated 30 ಮಾರ್ಚ್ 2020, 9:07 IST
   

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌–19 ಸೋಂಕಿತರ ಸಂಖ್ಯೆ 84ಕ್ಕೆ ಏರಿಕೆಯಾಗಿದೆ. ಸೋಮವಾರ ತುಮಕೂರಿನ ವ್ಯಕ್ತಿಯೊಬ್ಬರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ಈ ಹಿಂದೆ ಇದೇ ಕಾಯಿಲೆಯಿಂದ ಮೃತಪಟ್ಟಿದ್ದ ಶಿರಾದ 84 ವರ್ಷದ ವೃದ್ಧನ 13 ವರ್ಷದ ಮಗನಲ್ಲಿ ಈ ಕಾಯಿಲೆ ಕಂಡುಬಂದಿದೆ.

ಕಾಯಿಲೆ ಪಿಡಿತ ವ್ಯಕ್ತಿಯನ್ನು ಬೆಂಗಳೂರಿನ ಇಂದಿರಾ ಗಾಂಧಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೃತವ್ಯಕ್ತಿಯ ಸಂಪರ್ಕದಲ್ಲಿದ್ದ ಇನ್ನೂ 13 ವ್ಯಕ್ತಿಗಳನ್ನು ಸಹ ವೈದ್ಯಕೀಯ ತಪಾಸಣೆ ಒಳಪಡಿಸಲಾಗಿತ್ತು. ಅವರಲ್ಲಿ ಸೋಂಕು ಕಂಡುಬಂದಿಲ್ಲ ಎಂದು ಜಿಲ್ಲಾಧಿಕಾರಿ ಕೆ.ರಾಕೇಶ್‌ ಕುಮಾರ್ ತಿಳಿಸಿದ್ದಾರೆ.

ADVERTISEMENT

ತುಮಕೂರು ಜಿಲ್ಲೆಯಲ್ಲಿನ ಮೂವತ್ತು ವ್ಯಕ್ತಿಗಳ ಸೋಂಕು ಪರೀಕ್ಷೆಯ ವರದಿ ಬರಬೇಕಿದೆ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.