ADVERTISEMENT

ವಿಧಾನ ಪರಿಷತ್: ಎರಡು ಮಸೂದೆಗಳಿಗೆ ಪರಿಷತ್‌ ಅಂಗೀಕಾರ

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2022, 5:14 IST
Last Updated 20 ಸೆಪ್ಟೆಂಬರ್ 2022, 5:14 IST
   

ಬೆಂಗಳೂರು: ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ (ತಿದ್ದುಪಡಿ) ಮಸೂದೆ ಮತ್ತು ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ಮಸೂದೆ ವಿಧಾನ ಪರಿಷತ್‌ನಲ್ಲಿ ಧ್ವನಿಮತದ ಮೂಲಕ ಸೋಮವಾರ ಅಂಗೀಕಾರಗೊಂಡಿದೆ

ಮಸೂದೆಗಳನ್ನು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಮಂಡಿಸಿದರು. ಠೇವಣಿದಾರರ ಹಿತಾಸಕ್ತಿಯನ್ನು ದೃಷ್ಟಿಯಲ್ಲಿಟ್ಟು, ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ ಕಾಯ್ದೆಯ ತಿದ್ದುಪಡಿಗೆ ಪ್ರಸ್ತಾಪಿಸಲಾಗಿದೆ.ಬಗರ್ ಹುಕುಂ ಅರ್ಜಿ ಹಾಕಲು ಮತ್ತೊಂದು ಅವಕಾಶ ಕಲ್ಪಿಸಲು ಜನರು, ಜನಪ್ರತಿನಿಧಿಗಳಿಂದ ಮನವಿ ಬಂದಿತ್ತು. .ಹೀಗಾಗಿ, ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿ ಸೀಮಿತವಾಗಿ ತಿದ್ದುಪಡಿಗೆ ಮಸೂದೆ ಮಂಡಿಸಲಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT