ನವದೆಹಲಿ: ರಾಜ್ಯ ವಿಧಾನ ಪರಿಷತ್ ನ ನಾಲ್ಕು ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಬಿಜೆಪಿ ಶನಿವಾರ ಪ್ರಕಟಿಸಿದೆ.
ಆಗ್ನೇಯ ಪದವೀಧರ ಕ್ಷೇತ್ರ, ಈಶಾನ್ಯ ಶಿಕ್ಷಕರ ಕ್ಷೇತ್ರ, ಬೆಂಗಳೂರು ಶಿಕ್ಷಕರ ಕ್ಷೇತ್ರ ಹಾಗೂ ಪಶ್ಚಿಮ ಪದವೀಧರ ಕ್ಷೇತ್ರಗಳಿಗೆ ಅಕ್ಟೋಬರ್ 28ರಂದು ಮತದಾನ ನಡೆಯಲಿದ್ದು, ನವೆಂಬರ್ 2ರಂದು ಮತ ಎಣಿಕೆ ನಿಗದಿಯಾಗಿದೆ.
ಚಿದಾನಂದ.ಎಂ. ಗೌಡ, ಎಸ್.ವಿ. ಸಂಕನೂರ, ಶಶಿಲ್ ನಮೋಶಿ ಹಾಗೂ ಪುಟ್ಟಣ್ಣ ಅವರಿಗೆ ಟಿಕೆಟ್ ನೀಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.