ADVERTISEMENT

ಸಂಪುಟ ವಿಸ್ತರಣೆ ಬಳಿಕ ಬಿಜೆಪಿ ಬಣ್ಣ ಬಯಲು: ಪರಿಷತ್ ವಿಪಕ್ಷ ನಾಯಕ ಪಾಟೀಲ್

​ಪ್ರಜಾವಾಣಿ ವಾರ್ತೆ
Published 17 ಡಿಸೆಂಬರ್ 2019, 2:39 IST
Last Updated 17 ಡಿಸೆಂಬರ್ 2019, 2:39 IST
   

ಬಾಗಲಕೋಟೆ: ‘ರಾಜ್ಯ ಸರ್ಕಾರ ಸುಭದ್ರವಾಗಿದೆ ಎಂದು ಬಿಜೆಪಿ ಹಗಲು ಕನಸು ಕಾಣುತ್ತಿದೆ. ಸಂಪುಟ ವಿಸ್ತರಣೆ ನಂತರ ಅದರನಿಜ ಬಣ್ಣ ಬಯಲಾಗಲಿದೆ’ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ ಹೇಳಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಉಪ ಚುನಾವಣೆಯಲ್ಲಿ ಆಡಳಿತ ಪಕ್ಷದ ಪರ ಜನರು ಒಲವು ತೋರುವುದು ಸಾಮಾನ್ಯ. ಸ್ಥಿರ ಸರ್ಕಾರ ಬೇಕು ಎಂಬ ಕಾರಣಕ್ಕೆ ಮತದಾರರು ಬಿಜೆಪಿಗೆ ಬೆಂಬಲ ನೀಡಿದ್ದಾರೆ. ಆದರೂ ಪ್ರತಿ ಮತ ಕ್ಷೇತ್ರಕ್ಕೆ ಬಿಜೆಪಿ ₹ 100 ಕೋಟಿ ಖರ್ಚು ಮಾಡಿದೆ’ ಎಂದು ಆರೋಪಿಸಿದರು.

‘ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್ ರಾಜೀನಾಮೆ ಅಂಗೀಕಾರ ವಿಚಾರ ಹೈ ಕಮಾಂಡ್‌ ಅಂಗಳದಲ್ಲಿದೆ. ಅವರೇ ನಿರ್ಧಾರ ತೆಗೆದುಕೊಳ್ಳುತ್ತಾರೆ’ ಎಂದರು.

ADVERTISEMENT

‘ಜಿಲ್ಲೆಯಲ್ಲಿ ಉಂಟಾದ ಪ್ರವಾಹದಿಂದ ಸಂತ್ರಸ್ತರಾದವರಿಗೆ ಮನೆ ನಿರ್ಮಿಸಿಕೊಳ್ಳಲು ಕೇವಲ ₹ 1 ಲಕ್ಷ ಪರಿಹಾರ ವಿತರಿಸಲಾಗಿದೆ. ಉಳಿದ ಪರಿಹಾರ ನೀಡುತ್ತಿಲ್ಲ.ಬೆಳೆ ಹಾನಿಗೆ ಎಷ್ಟು ಪರಿಹಾರ ನೀಡುತ್ತೇವೆ ಎಂಬುವುದನ್ನು ಇದುವರೆಗೆ ಘೋಷಿಸಿಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.