ADVERTISEMENT

ಯೋಗಿಶ್‌ ಗೌಡ ಕೊಲೆ ಪ್ರಕರಣ: ‘ಬಿ‘ ರಿಪೋರ್ಟ್‌ ತಿರಸ್ಕೃತ

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2023, 16:36 IST
Last Updated 2 ಅಕ್ಟೋಬರ್ 2023, 16:36 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಬೆಂಗಳೂರು: ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಬಿಜೆಪಿ ಸದಸ್ಯರಾಗಿದ್ದ ಯೋಗೀಶ್‌ಗೌಡ ಗೌಡರ್ ಕೊಲೆ ಪ್ರಕರಣದಲ್ಲಿ ಪೊಲೀಸರು ಸಲ್ಲಿಸಿದ್ದ ‘ಬಿ‘  ರಿಪೋರ್ಟ್‌ ಅನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಯೋಗಿಶ್‌ಗೌಡರ ತಮ್ಮ ಗುರುನಾಥಗೌಡ ಗೌಡರ್‌ ಸಲ್ಲಿಸಿದ್ದ ದೂರಿನ ಅನ್ವಯ ತನಿಖೆ ನಡೆಸಿದ್ದ ಧಾರವಾಡ ಪೊಲೀಸರು 2019ರಲ್ಲಿ ವಿಚಾರಣಾ ನ್ಯಾಯಾಲಯಕ್ಕೆ ‘ಬಿ‘ ರಿಪೋರ್ಟ್‌ ಸಲ್ಲಿಸಿದ್ದರು. ‌ನಂತರ ಈ ಪ್ರಕರಣವನ್ನು ಧಾರವಾಡ ಜಿಲ್ಲೆಯ 4ನೇ ಹೆಚ್ಚುವರಿ ಸೆಷನ್ಸ್‌ ನ್ಯಾಯಾಲಯವು ಬೆಂಗಳೂರಿನಲ್ಲಿರುವ, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯ‘ಕ್ಕೆ ವರ್ಗಾಯಿಸಿತ್ತು.

ADVERTISEMENT

‘ಬಿ‘ ರಿಪೋರ್ಟ್‌ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಚಾರಣಾ ನ್ಯಾಯಾಲಯದ ನ್ಯಾಯಾಧೀಶೆ ಜೆ.ಪ್ರೀತ್‌ ವಿಚಾರಣೆ ನಡೆಸಿದ್ದು, ‘ಬಿ ರಿಪೋರ್ಟ್‌ ತೃಪ್ತಿಕರವಾಗಿಲ್ಲ. ಧಾರವಾಡ ಉಪನಗರ ಠಾಣೆಯ ಪೊಲೀಸರು ಪ್ರಕರಣವನ್ನು ಶೀಘ್ರವಾಗಿ ತನಿಖೆ ನಡೆಸಬೇಕು‘ ಎಂದು ಆದೇಶಿಸಿದ್ದಾರೆ.

ಪ್ರಕರಣವೇನು?: ಯೋಗೀಶ್‌ಗೌಡ ಗೌಡರ್ ಕೊಲೆ 2016ರ ಜೂನ್‌ನಲ್ಲಿ ನಡೆದಿತ್ತು. ಈ ಪ್ರಕರಣವನ್ನು ಸಿಬಿಐ ತನಿಖೆ ನಡೆಸುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 2020ರ ನವೆಂಬರ್‌ನಲ್ಲಿ ವಿನಯ ಕುಲಕರ್ಣಿ ಅವರನ್ನು ಬಂಧಿಸಿ, ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಒಂಬತ್ತು ತಿಂಗಳ ಕಾಲ ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.