ADVERTISEMENT

ಕೋರ್ಟ್‌ಗಳ ರಜೆ ಮೇ 16ರವರೆಗೆ ವಿಸ್ತರಣೆ

​ಪ್ರಜಾವಾಣಿ ವಾರ್ತೆ
Published 30 ಏಪ್ರಿಲ್ 2020, 21:44 IST
Last Updated 30 ಏಪ್ರಿಲ್ 2020, 21:44 IST
   

ಬೆಂಗಳೂರು: ಹೈಕೋರ್ಟ್ ಸೇರಿದಂತೆ ರಾಜ್ಯದ ಎಲ್ಲಾ ವಿಚಾರಣಾ ಹಾಗೂ ಜಿಲ್ಲಾ ನ್ಯಾಯಾಲಯಗಳಿಗೆ ಮೇ 3 ರವರೆಗೆ ನೀಡಲಾಗಿದ್ದ ರಜೆಯನ್ನು ಮೇ 16ರವರೆಗೆ ವಿಸ್ತರಿಸಲಾಗಿದೆ.

ಈ ಕುರಿತಂತೆ ರಿಜಿಸ್ಟ್ರಾರ್ ಜನರಲ್ ರಾಜೇಂದ್ರ ಬಾದಾಮಿಕರ ಅವರು ಗುರುವಾರ ಅಧಿಸೂಚನೆ ಹೊರಡಿಸಿದ್ದಾರೆ.

ಈ ಆದೇಶದ ಅನ್ವಯ ಮೇ‌ 16ರವರೆಗೆ ಹೈಕೋರ್ಟಿನ ಬೆಂಗಳೂರು ಪ್ರಧಾನ ಪೀಠ, ಕಲಬುರ್ಗಿ ಹಾಗೂ ಧಾರವಾಡ ನ್ಯಾಯಪೀಠಗಳೂ ಸೇರಿದಂತೆ ಎಲ್ಲ ಜಿಲ್ಲಾ, ವಿಚಾರಣಾ, ಕೌಟುಂಬಿಕ, ಕಾರ್ಮಿಕ ನ್ಯಾಯಾಲಯ ಮತ್ತು ಕೈಗಾರಿಕಾ ನ್ಯಾಯಮಂಡಳಿಗಳಿಗೆ ರಜೆ ಇರಲಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.