ADVERTISEMENT

ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಬಾಲಕನಿಗೆ ಕೋರ್ಟ್‌ ಶಿಕ್ಷೆ ಏನು ಗೊತ್ತೆ?

ಲೈಂಗಿಕ ಕಿರುಕುಳ ಆರೋಪ ಸಾಬೀತು

​ಪ್ರಜಾವಾಣಿ ವಾರ್ತೆ
Published 31 ಅಕ್ಟೋಬರ್ 2019, 13:43 IST
Last Updated 31 ಅಕ್ಟೋಬರ್ 2019, 13:43 IST
   

ಚಿತ್ರದುರ್ಗ: ಏಳು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಬಾಲಕನಿಗೆ ಸರ್ಕಾರಿ ಆಸ್ಪತ್ರೆಯಲ್ಲಿ 52 ದಿನ ಉಚಿತವಾಗಿ ಕೆಲಸ ಮಾಡುವಂತೆ ಬಾಲ ನ್ಯಾಯ ಮಂಡಳಿ ಆದೇಶಿಸಿದೆ.

ಒಂದು ವರ್ಷ ಪ್ರತಿ ಶನಿವಾರ ಕೆಲಸ ಮಾಡಬೇಕು ಹಾಗೂ ₹ 10 ಸಾವಿರ ದಂಡ ಪಾವತಿಸುವಂತೆ ನ್ಯಾಯ ಮಂಡಳಿ ಆದೇಶದಲ್ಲಿ ತಿಳಿಸಿದೆ.

ಬಾಲಕಿಯ ಮೇಲೆ ಬಾಲಕನೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣ ಚಳ್ಳಕೆರೆ ತಾಲ್ಲೂಕಿನಲ್ಲಿ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಾದ ಮತ್ತು ಪ್ರತಿವಾದ ಆಲಿಸಿದ ನ್ಯಾಯ ಮಂಡಳಿ ಆದೇಶ ಪ್ರಕಟಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.