ADVERTISEMENT

ಹಿಂದೂ ದೇವತೆಗಳ ಅವಹೇಳನ: ನಿರಾಣಿ ವಿರುದ್ಧ ತನಿಖೆಗೆ ಆದೇಶ

​ಪ್ರಜಾವಾಣಿ ವಾರ್ತೆ
Published 19 ಆಗಸ್ಟ್ 2021, 1:23 IST
Last Updated 19 ಆಗಸ್ಟ್ 2021, 1:23 IST
ಮುರುಗೇಶ್ ನಿರಾಣಿ
ಮುರುಗೇಶ್ ನಿರಾಣಿ   

ಬೆಂಗಳೂರು: ಹಿಂದೂ ದೇವತೆಗಳ ವಿರುದ್ಧ ಆಕ್ಷೇಪಾರ್ಹ ಸಂದೇಶ ರವಾನಿಸಿದ ಆರೋಪದ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ವಿರುದ್ಧ ತನಿಖೆ ನಡೆಸುವಂತೆ ಕೊಡಿಗೇಹಳ್ಳಿ ಪೊಲೀಸ್ ಠಾಣೆಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.

ಗೋವಿಂದರಾಮ್‌ ಎಂಬುವರು ಸಲ್ಲಿಸಿದ್ದ ಖಾಸಗಿ ದೂರು ವಿಚಾರಣೆ ನಡೆಸಿದ ನ್ಯಾಯಾಲಯ, ಸೆ.13ರೊಳಗೆ ತನಿಖಾ ವರದಿ ಸಲ್ಲಿಸಲು ಸೂಚನೆ ನೀಡಿದೆ.

"ಹಿಂದೂ ದೇವತೆಗಳನ್ನು ಅವಹೇಳನ ಮಾಡುವ ಸಂದೇಶವನ್ನು ವಾಟ್ಸ್‌ಆ್ಯಪ್ ಗ್ರೂಪ್‌ನಲ್ಲಿ ನಿರಾಣಿ ಅವರು ರವಾನಿಸಿದ್ದು, ಅವರ ವಿರುದ್ಧ ಐಪಿಸಿ ಸೆಕ್ಷನ್ 153, 259, 259ಎ ಅಡಿಯಲ್ಲಿ ಕ್ರಮ ಕೈಗೊಳ್ಳಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ.

ADVERTISEMENT

ಕೊಡಿಗೇಹಳ್ಳಿ ಠಾಣೆಯಲ್ಲಿ ಈ ಸಂಬಂಧ ಎಫ್‌ಐಆರ್ ದಾಖಲಾಗುವ ಸಾಧ್ಯತೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.