ADVERTISEMENT

‘ಕೃತಿಚೌರ್ಯ’: ಕನ್ನಡ ವಿ.ವಿ ಕುಲಸಚಿವರಿಗೆ ಸಮನ್ಸ್‌

ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿರುದ್ಧ ಕೃತಿಚೌರ್ಯ ಆರೋಪ

​ಪ್ರಜಾವಾಣಿ ವಾರ್ತೆ
Published 16 ಜನವರಿ 2021, 18:15 IST
Last Updated 16 ಜನವರಿ 2021, 18:15 IST
ಹಂಪಿ ಕನ್ನಡ ವಿಶ್ವವಿದ್ಯಾಲಯ
ಹಂಪಿ ಕನ್ನಡ ವಿಶ್ವವಿದ್ಯಾಲಯ   

ಹೊಸಪೇಟೆ: ಕೃತಿಚೌರ್ಯ ಆರೋಪ ಕುರಿತಂತೆ ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ.ಎ.ಸುಬ್ಬಣ್ಣ ರೈ ಅವರಿಗೆ ಬೆಂಗಳೂರು ಸೆಷನ್ಸ್‌ ನ್ಯಾಯಾಲಯ ಸಮನ್ಸ್‌ ಜಾರಿಮಾಡಿದೆ.

ಜ.22ರಂದು ವಿಚಾರಣೆಗೆ ಖುದ್ದು ಹಾಜರಾಗುವಂತೆ ತಿಳಿಸಿದೆ. ಹಿರಿಯ ಸಾಹಿತಿ ಪುಸ್ತಕಮನೆ ಹರಿಹರಪ್ರಿಯ ಅವರು 1974ರಲ್ಲಿ ಬರೆದಿದ್ದ ‘ಕುವೆಂಪು ಪತ್ರಗಳು’ ಪುಸ್ತಕದಿಂದ ಕುವೆಂಪು ಅವರ 62 ಪತ್ರಗಳನ್ನು ಯಥಾವತ್ತಾಗಿ ಕನ್ನಡ ವಿಶ್ವವಿದ್ಯಾಲಯ ಕುವೆಂಪು ಸಮಗ್ರ ಸಾಹಿತ್ಯದ ಹನ್ನೆರಡನೇ ಸಂಪುಟದಲ್ಲಿ ಪ್ರಕಟಿಸಿದೆ ಎಂಬ ಆರೋಪವಿದೆ.

ಹರಿಹರಪ್ರಿಯ ಅವರು ಡಿ.15ರಂದು ಅಂಚೆ ಮೂಲಕ ವಿಶ್ವವಿದ್ಯಾಲಯಕ್ಕೆ ಕಾನೂನು ಪ್ರಕಾರ ನೋಟಿಸ್‌ ಕಳುಹಿಸಿದ್ದರು. ವಿಶ್ವವಿದ್ಯಾಲಯದಿಂದ ಪ್ರತಿಕ್ರಿಯೆ ಬರದ ಕಾರಣ ಅವರು ಕೋರ್ಟ್ ಮೆಟ್ಟಿಲೇರಿದ್ದಾರೆ.

ADVERTISEMENT

‘ವಿಶ್ವವಿದ್ಯಾಲಯದ ಸಿಂಡಿಕೇಟ್‌ನ ಸದಸ್ಯರ ಗಮನಕ್ಕೆ ವಿಷಯ ತಂದರೂ ಪ್ರಯೋಜನವಾಗಿಲ್ಲ. ವಿಧಿಯಿಲ್ಲದೆ ನ್ಯಾಯಾಲಯದ ಮೊರೆ ಹೋಗಿರುವೆ’ ಎಂದು ಹರಿಹರಪ್ರಿಯ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ್ದಾರೆ.

ಕುಲಸಚಿವ ಪ್ರೊ.ಎ.ಸುಬ್ಬಣ್ಣ ರೈ ಅವರು, ‘ಸಮನ್ಸ್‌ ನೀಡಿರುವುದು ನಿಜ. ಸತ್ಯಶೋಧನಾ ಸಮಿತಿ ಸಭೆ ನಡೆದಿದೆ. ಇಷ್ಟರಲ್ಲೇ ಹರಿಹರಪ್ರಿಯ ಅವರಿಗೆ ಮಾಹಿತಿ ನೀಡಲಾಗುವುದು’ ಎಂದು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.