ADVERTISEMENT

ಕೋರ್ಟ್ ಕಲಾಪ ಆರಂಭಕ್ಕೆ ಮಾರ್ಗಸೂಚಿ ಪ್ರಕಟ

​ಪ್ರಜಾವಾಣಿ ವಾರ್ತೆ
Published 26 ಮೇ 2020, 19:34 IST
Last Updated 26 ಮೇ 2020, 19:34 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ಜೂನ್ 1 ರಿಂದ ಕೋರ್ಟ್ ಕಲಾಪ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಜಿಲ್ಲಾ ನ್ಯಾಯಾಲಯಗಳಿಗೆ ಮಾರ್ಗಸೂಚಿ ಪ್ರಕಟಿಸಲಾಗಿದೆ.

ಈ ಕುರಿತು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ 38 ಅಂಶಗಳ ಮಾರ್ಗಸೂಚಿಗೆ ಸಂಬಂಧಿಸಿದಂತೆ ಆದೇಶ ಹೊರಡಿಸಿದ್ದಾರೆ.

'ಪ್ರತಿ ಕೋರ್ಟ್ ಹಾಲ್ ಗಳಲ್ಲಿ 20 ಕ್ಕಿಂತ ಹೆಚ್ಚು ವಕೀಲರು, ಸಿಬ್ಬಂದಿ ಇರುವಂತಿಲ್ಲ. 20 ಕ್ಕಿಂತ ಹೆಚ್ಚು ವ್ಯಕ್ತಿಗಳಿದ್ದರೆ ಕೋರ್ಟ್ ಕಲಾಪ ಸ್ಥಗಿತಗೊಳಿಸಬೇಕಾಗುತ್ತದೆ. ಮೊದಲೆರಡು ವಾರ ಸಾಕ್ಷ್ಯ ವಿಚಾರಣೆಗೆ ಅವಕಾಶವಿಲ್ಲ. ಕೇವಲ ವಕೀಲರ ವಾದ ಮಂಡನೆಗಷ್ಟೇ ಅವಕಾಶ ನೀಡಲಾಗುವುದು' ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ADVERTISEMENT

ಕೋರ್ಟ್ ಗಳಿಗೆ ಕಕ್ಷಿದಾರರ ಪ್ರವೇಶಕ್ಕೆ ನಿರ್ಬಂಧವಿರಲಿದೆ. ಹಾಜರಾಗುವ ವಕೀಲರು ಹೊರದೇಶ, ಹೊರ ರಾಜ್ಯ ಅಥವಾ ನಿರ್ಬಂಧಿತ ವಲಯಕ್ಕೆ ಭೇಟಿ ನೀಡಿಲ್ಲ ಎಂಬ ಬಗ್ಗೆ ಪ್ರಮಾ ಣಪತ್ರ ಸಲ್ಲಿಸುವುದು ಕಡ್ಡಾಯವಾಗಿದೆ.

'ವಕೀಲರು, ನ್ಯಾಯಾಧೀಶರು ಮಾಸ್ಕ್ ಧರಿಸಬೇಕು. ವಕೀಲರು ಮತ್ತು ಸಿಬ್ಬಂದಿ ನಡುವೆ 1 ಮೀಟರ್ ಅಂತರ ಕಾಯ್ದುಕೊಳ್ಳಬೇಕು. ಬೆಳಗ್ಗೆ 10 ಹಾಗೂ ಮಧ್ಯಾಹ್ನ 10 ಕೇಸ್ ಗಳನ್ನು ಮಾತ್ರ ವಿಚಾರಣೆ ನಡೆಸಬೇಕು. ಅಂತೆಯೇ ಕೆಮ್ಮು, ನೆಗಡಿ, ಜ್ವರ ಇದ್ದವರಿಗೆ ಪ್ರವೇಶವಿಲ್ಲ' ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.