ADVERTISEMENT

18 ವರ್ಷ ಮೇಲ್ಪಟ್ಟವರಿಗೆ ಕೊವೊ-ವ್ಯಾಕ್ಸ್: ಕೇಂದ್ರ, ರಾಜ್ಯಕ್ಕೆ ನೋಟಿಸ್

18 ವರ್ಷ ಮೇಲ್ಪಟ್ಟವರಿಗೆ ಕೊವೊ-ವ್ಯಾಕ್ಸ್ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿ

​ಪ್ರಜಾವಾಣಿ ವಾರ್ತೆ
Published 20 ಜೂನ್ 2022, 20:22 IST
Last Updated 20 ಜೂನ್ 2022, 20:22 IST
   

ಬೆಂಗಳೂರು: 'ರಾಜ್ಯದಲ್ಲಿ 18 ವರ್ಷಕ್ಕಿಂತ ಮೇಲ್ಪಟ್ಟವರಿಗೆಕೊವೊವ್ಯಾಕ್ಸ್ ನೀಡಲು ಆದೇಶಿಸಬೇಕು' ಎಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.

ಈ ಕುರಿತು ಅರುಣ್ ಕುಮಾರ್ ಅಗರ್‌ವಾಲ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಸ್.ಜಿ. ಪಂಡಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು.

ಪ್ರತಿವಾದಿಗಳಾದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳಿಗೆ ನೋಟಿಸ್ ಜಾರಿಗೊಳಿಸಲು ನ್ಯಾಯಪೀಠ ಆದೇಶಿಸಿದೆ.

ADVERTISEMENT

ಕೇಂದ್ರ ಔಷಧ ಮಾನದಂಡ ನಿಯಂತ್ರಣ ಸಂಸ್ಥೆ (ಸಿಡಿಎಸ್‌ಸಿಒ) ಮತ್ತು
ಸೀರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ಗೆ ತುರ್ತು ನೋಟಿಸ್ ಜಾರಿಗೊಳಿಸಲು ಆದೇಶಿಸಿದ ನ್ಯಾಯಪೀಠ ವಿಚಾರಣೆ ಮುಂದೂಡಿದೆ.

ತುರ್ತು ಪರಿಸ್ಥಿತಿಯಲ್ಲಿ ನಿರ್ಬಂಧಿತ ಬಳಕೆಯಂತೆ ವಯಸ್ಕರಿಗೆ ಮತ್ತು ಮಕ್ಕಳಿಗೆ ಕೊವೊವ್ಯಾಕ್ ಲಸಿಕೆ
ಬಳಸಲು ಕೇಂದ್ರ ಸರ್ಕಾರವು 2021ರ ಮಾರ್ಚ್ 8ರಂದು ಮತ್ತು 2021ರ ಡಿಸೆಂಬರ್ 27ರಂದು ಅನುಮತಿ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.