ADVERTISEMENT

ಕೋವಿಡ್: ಸಕ್ರಿಯ ಪ್ರಕರಣ 7,296ಕ್ಕೆ ಏರಿಕೆ

​ಪ್ರಜಾವಾಣಿ ವಾರ್ತೆ
Published 16 ಜುಲೈ 2022, 19:23 IST
Last Updated 16 ಜುಲೈ 2022, 19:23 IST

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳು ಏರುಗತಿ ಪಡೆದಿದ್ದು, ಸೋಂಕಿತರ ಸಂಖ್ಯೆ 7,296ಕ್ಕೆ ತಲುಪಿದೆ.

ಬೆಂಗಳೂರಿನಲ್ಲಿ 1,234 ಸೇರಿ ರಾಜ್ಯದಲ್ಲಿ 1,374 ಮಂದಿ ಸೋಂಕಿತರಾಗಿರುವುದು ಶನಿವಾರ ದೃಢಪಟ್ಟಿದೆ.ಒಂದು ದಿನದ ಅವಧಿಯಲ್ಲಿ 28,270 ಪರೀಕ್ಷೆಗಳನ್ನು ನಡೆಸಲಾಗಿದೆ. ಸೋಂಕು ದೃಢ ಪ್ರಮಾಣ ಶೇ 4.86 ರಷ್ಟಿದೆ.ಕೋವಿಡ್ಪೀಡಿತರಲ್ಲಿ ಬೆಂಗಳೂರಿನಲ್ಲಿ ಇಬ್ಬರು ಹಾಗೂ ಬಳ್ಳಾರಿಯಲ್ಲಿ ಒಬ್ಬರು ಮೃತಪಟ್ಟಿದ್ದಾರೆ.

ಬೆಂಗಳೂರಿನಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 6,704ಕ್ಕೆ ಏರಿಕೆಯಾಗಿದೆ. 14 ಜಿಲ್ಲೆಗಳಲ್ಲಿ ಸಕ್ರಿಯ ಪ್ರಕರಣಗಳು ಎರಡಂಕಿಯಲ್ಲಿದೆ. ರಾಜ್ಯದಲ್ಲಿ ಈವರೆಗೆಕೋವಿಡ್ಪೀಡಿತರಾದವರ ಒಟ್ಟು ಸಂಖ್ಯೆ 39.85 ಲಕ್ಷಕ್ಕೆ ಏರಿಕೆಯಾಗಿದೆ. 39.37 ಲಕ್ಷಕ್ಕೂ ಹೆಚ್ಚು ಮಂದಿ ಚೇತರಿಸಿಕೊಂಡಿದ್ದಾರೆ.

ADVERTISEMENT

ಕೋವಿಡ್‌ಗೆ ಈವರೆಗೆ ಮೃತಪಟ್ಟವರ ಒಟ್ಟು ಸಂಖ್ಯೆ 40,088ಕ್ಕೆ ಏರಿಕೆಯಾಗಿದೆ. ಮರಣ ಪ್ರಮಾಣ ದರ ಶೇ 0.21ರಷ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.