ADVERTISEMENT

ಕೋವಿಡ್–19: ಮತ್ತೆ 9,725 ಪ್ರಕರಣ ಪತ್ತೆ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2020, 18:58 IST
Last Updated 16 ಸೆಪ್ಟೆಂಬರ್ 2020, 18:58 IST

ಬೆಂಗಳೂರು: ರಾಜ್ಯದಲ್ಲಿ ಮತ್ತೆ 9,725 ಮಂದಿ ಕೋವಿಡ್ ಪೀಡಿತರಾಗಿರುವುದು ಹಾಗೂ ಸೋಂಕಿತರಲ್ಲಿ 6,583 ಮಂದಿಗೆ ಕಾಯಿಲೆ ವಾಸಿಯಾಗಿರುವುದು ಬುಧವಾರ ದೃಢಪಟ್ಟಿದೆ.

ಕಳೆದ ಎರಡು ದಿನಗಳಿಂದ ಇಳಿಮುಖವಾಗಿದ್ದ ಪ‍್ರಕರಣಗಳ ಸಂಖ್ಯೆಪುನಃ 9 ಸಾವಿರದ ಗಡಿ ದಾಟಿದೆ.
ಇದರಿಂದಾಗಿ ಒಟ್ಟು ಸೋಂಕಿತರ ಸಂಖ್ಯೆ 4.84 ಲಕ್ಷ ತಲುಪಿದೆ.ಈ ತಿಂಗಳು 16 ದಿನಗಳಲ್ಲಿ 1.42 ಲಕ್ಷ ಮಂದಿ ಸೋಂಕಿತರಾಗಿದ್ದಾರೆ. ಇದರಿಂದಾಗಿ ರಾಜ್ಯದಲ್ಲಿ ಸೋಂಕು ದೃಢ ಪ್ರಮಾಣ ಶೇ 12.16ಕ್ಕೆ ಏರಿಕೆಯಾಗಿದೆ.

ಒಂದೇ ದಿನ 70,981 ಮಂದಿಗೆಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದ್ದು, ಈವರೆಗೆ ಕೋವಿಡ್ ಪರೀಕ್ಷೆ ಮಾಡಿಸಿಕೊಂಡವರ ಸಂಖ್ಯೆ 40 ಲಕ್ಷದ ಗಡಿ (39.86 ಲಕ್ಷ) ಸಮೀಪಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.