ಮೈಸೂರು: ಮೈಸೂರಿನಲ್ಲಿ ಮತ್ತೊಬ್ಬ ವ್ಯಕ್ತಿಗೆ ಕೊರೊನಾ ವೈರಸ್ ಸೋಂಕು (ಕೋವಿಡ್–19) ತಗುಲಿರುವುದು ದೃಢಪಟ್ಟಿದೆ.
ಸುಮಾರು 45 ವರ್ಷದ ವ್ಯಕ್ತಿ ದುಬೈನಿಂದ ಬಂದು ಬೆಂಗಳೂರಿಂದ ಟ್ಯಾಕ್ಸಿಯಲ್ಲಿ ಮೈಸೂರು ನಗರಕ್ಕೆ ಬಂದಿದ್ದರು ಎಂದು ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್ ತಿಳಿಸಿದ್ದಾರೆ.
ಮೂರು ದಿನಗಳ ಹಿಂದೆ ದುಬೈನಿಂದ ಮೈಸೂರಿಗೆ ಬಂದಿದ್ದ 35 ವರ್ಷದ ವ್ಯಕ್ತಿಯಲ್ಲೂ ಕೋವಿಡ್ 19 ದೃಢಪಟ್ಟಿತ್ತು. ಇದರೊಂದಿಗೆ ಜಿಲ್ಲೆಯಲ್ಲಿ ಎರಡು ಪ್ರಕರಣ ದಾಖಲಾದಂತಾಗಿದೆ.ರಾಜ್ಯದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 28ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 27ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಸೋಮವಾರ ಬೆಳಿಗ್ಗೆ ತಿಳಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.