ADVERTISEMENT

Covid-19 Karnataka Update: ಹೊಸ ಪ್ರಕರಣ ಮತ್ತೆ ಏರಿಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 6 ಜುಲೈ 2021, 20:37 IST
Last Updated 6 ಜುಲೈ 2021, 20:37 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಜ್ಯದಲ್ಲಿ ಒಂದೂವರೆ ಸಾವಿರದ ಆಸುಪಾಸಿಗೆ ಇಳಿಕೆ ಕಂಡಿದ್ದ ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆಮಂಗಳವಾರ 3,104ಕ್ಕೆ ಏರಿಕೆ ಕಂಡಿದೆ.

ಭಾನುವಾರ ಹೊಸ ಪ್ರಕರಣಗಳು 1,564ಕ್ಕೆ ಇಳಿದಿತ್ತು. ಸಂಖ್ಯೆ ಎರಡು ದಿನಗಳಿಂದ ಏರುಗತಿ ಪಡೆದಿದೆ. ಒಂದು ದಿನದಲ್ಲಿ 1.16 ಲಕ್ಷ ಮಾದರಿಗಳ ಪರೀಕ್ಷೆ ಮಾಡಲಾಗಿದ್ದು, ಸೋಂಕು ದೃಢಪ್ರಮಾಣ ಶೇ 2.65ರಷ್ಟಿದೆ.

ಬೆಂಗಳೂರಿನಲ್ಲಿ 715 ಮಂದಿ ಕೋವಿಡ್ ಪೀಡಿತರಾಗಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಹೊಸ ‍ಪ್ರಕರಣಗಳು 500ರ ಗಡಿಯೊಳಗಿವೆ. 12 ಜಿಲ್ಲೆಗಳಲ್ಲಿ ಈ ಸಂಖ್ಯೆ ಎರಡಂಕಿ ಹಾಗೂ 6 ಜಿಲ್ಲೆಗಳಲ್ಲಿ ಒಂದಂಕಿಯಲ್ಲಿದೆ. ಈವರೆಗೆ ಕೋವಿಡ್ ಪೀಡಿತರಾದವರ ಒಟ್ಟು ಸಂಖ್ಯೆ 28.59 ಲಕ್ಷ ದಾಟಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 40 ಸಾವಿರಕ್ಕೆ ಇಳಿಕೆಯಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.