ಬೆಂಗಳೂರು:24 ಗಂಟೆಗಳಲ್ಲಿ ರಾಜ್ಯದಲ್ಲಿಹೊಸದಾಗಿ 3,979 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಕರ್ನಾಟಕದಲ್ಲಿ ಇದುವರೆಗೆ ವರದಿಯಾದ ಸೋಂಕು ಪ್ರಕರಣಗಳ ಸಂಖ್ಯೆ 28,23,444ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಇಂದು ಮೃತಪಟ್ಟ 138 ಮಂದಿಯೂ ಸೇರಿದಂತೆ ಈವರೆಗೆ ಒಟ್ಟು 34,425 ಮಂದಿ ಸೋಂಕಿನಿಂದ ಸಾವಿಗೀಡಾಗಿದ್ದಾರೆ. ಇದರೊಂದಿಗೆ ಸೊಂಕಿನಿಂದ ಮೃತಪಟ್ಟವರ ಪ್ರಮಾಣ ಶೇ. 3.46ಕ್ಕೆ ಹೆಚ್ಚಾಗಿದೆ.ಹೊಸದಾಗಿ 9,768 ಮಂದಿ ಚೇತರಿಸಿಕೊಂಡಿದ್ದು, ಸದ್ಯ 1,10,523 ಪ್ರಕರಣಗಳು ಸಕ್ರಿಯವಾಗಿವೆ.
ಎಂದಿನಂತೆ ಬೆಂಗಳೂರಿನಲ್ಲಿ ಅತಿ ಹೆಚ್ಚು(969) ಪ್ರಕರಣಗಳು ವರದಿಯಾಗಿದ್ದು, 14 ಮಂದಿ ಮೃತಪಟ್ಟಿದ್ದಾರೆ. ಉಳಿದಂತೆ ದಕ್ಷಿಣ ಕನ್ನಡ (498)ಹಾಗೂ ಮೈಸೂರಿನಲ್ಲಿ (404)ನಾಲ್ಕುನೂರಕ್ಕಿಂತ ಹೆಚ್ಚು ಮತ್ತು ಹಾಸನ (336),ಶಿವಮೊಗ್ಗ (206),ಮಂಡ್ಯ (137), ತುಮಕೂರು (128),ಉಡುಪಿ (123), ದಾವಣಗೆರೆ (118), ಕೊಡಗು (115), ಚಿಕ್ಕಮಗಳೂರು(110), ಉತ್ತರ ಕನ್ನಡ (104)ಹಾಗೂ ಕೋಲಾರದಲ್ಲಿ (103) ನೂರಕ್ಕಿಂತ ಹೆಚ್ಚು ಪ್ರಕರಣಗಳು ವರದಿಯಾಗಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.