ADVERTISEMENT

ಕೋವಿಡ್: 5 ಸಾವಿರ ದಾಟಿದ ಸಕ್ರಿಯ ಪ್ರಕರಣ

​ಪ್ರಜಾವಾಣಿ ವಾರ್ತೆ
Published 21 ಜೂನ್ 2022, 16:03 IST
Last Updated 21 ಜೂನ್ 2022, 16:03 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ 738 ಮಂದಿ ಕೋವಿಡ್‍ಪೀಡಿತರಾಗಿರುವುದು ದೃಢಪಟ್ಟಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 5 ಸಾವಿರದ ಗಡಿ (5,020) ದಾಟಿದೆ.

ಒಂದು ದಿನದ ಅವಧಿಯಲ್ಲಿ 19,624 ಮಂದಿಗೆ ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ. ಸೋಂಕು ದೃಢ ಪ್ರಮಾಣ ಶೇ 3.76 ರಷ್ಟು ವರದಿಯಾಗಿದೆ. 9ಜಿಲ್ಲೆಗಳಲ್ಲಿ ಹೊಸದಾಗಿ ಪ್ರಕರಣಗಳು ಪತ್ತೆಯಾಗಿವೆ. ಬೆಂಗಳೂರಿನಲ್ಲಿಒ 698 ಮಂದಿ ಸೋಂಕಿತರಾಗಿದ್ದಾರೆ. ಮೈಸೂರು ಹಾಗೂ ದಕ್ಷಿಣ ಕನ್ನಡದಲ್ಲಿ ತಲಾ13 ಪ್ರಕರಣಗಳು ವರದಿಯಾಗಿವೆ. ಬೆಂಗಳೂರಿನಲ್ಲಿಸಕ್ರಿಯಪ್ರಕರಣಗಳ ಸಂಖ್ಯೆ 4,819ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಈವರೆಗೆಕೋವಿಡ್ಪೀಡಿತರಾದವರ ಒಟ್ಟು ಸಂಖ್ಯೆ 39.62 ಲಕ್ಷ ದಾಟಿದೆ. 39.16 ಲಕ್ಷಕ್ಕೂ ಹೆಚ್ಚು ಮಂದಿ ಚೇತರಿಸಿಕೊಂಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.